ಬೆಳಗಾವಿ : ಕೆಕೆ ಕೊಪ್ಪ ಗ್ರಾಮದಲ್ಲಿ ಹರ್ಷಾ ಶುಗರ್ಸ್ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಹರ್ಷಾ ಶುಗರ್ಸ್ ಕೆಪಿಎಲ್ -2026 ಕ್ರಿಕೆಟ್ ಪಂದ್ಯಾವಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಭರ್ಜರಿ ಚಾಲನೆ ನೀಡಿದರು.
ಕೆಕೆ ಕೊಪ್ಪ ಗ್ರಾಮದಲ್ಲಿನ ಕ್ರೀಡಾಭಿಮಾನಿಗಳು, ಯುವಕರು ಹಾಗೂ ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಮಟ್ಟದಲ್ಲಿ ಕ್ರೀಡಾಕಾರ್ಯಕ್ರಮಗಳನ್ನು ಆಯೋಜಿಸುವುದು ಯುವಕರಲ್ಲಿ ಶಿಸ್ತು, ತಂಡಭಾವನೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು. ಕ್ರೀಡೆ ಕೇವಲ ಮನರಂಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ವಿಕಾಸಕ್ಕೂ ಕಾರಣವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಯುವ ಪ್ರತಿಭೆಗಳನ್ನು ಗುರುತಿಸಿ ಉತ್ತೇಜಿಸುವ ಉದ್ದೇಶದಿಂದ ಈ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳಿಗೆ ಉತ್ತಮ ಅವಕಾಶ ನೀಡುವ ಮೂಲಕ ಅವರನ್ನು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳತ್ತ ಮುನ್ನಡೆಸುವುದು ಮುಖ್ಯ ಗುರಿಯಾಗಿದೆ.
Laxmi News 24×7