Breaking News

ಬಿಡದಿಯಲ್ಲಿ ರಣ ರಂಪಾಟ! ಇಷ್ಟಕ್ಕೆಲ್ಲ ರಾಜ್ಯ ಸರ್ಕಾರದ ಬೇಜವಾಬ್ದಾರಿ, ಚಿತಾವಣೆಯೇ ಕಾರಣ: ಎಚ್​ಡಿಕೆ

Spread the love

ಬೆಂಗಳೂರು: ರಾಜ್ಯದಲ್ಲಿ ಬಿಡದಿ ಟೌನ್​ಶಿಪ್​ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದು ಸರ್ವೇ ಮಾಡಲು ಮುಂದಾದ ಅಧಿಕಾರಿಗಳ ವಿರುದ್ಧ ಪೊರಕೆ, ಕಲ್ಲು ತೂರಿ ರೈತರು ರೊಚ್ಚಿಗೆದ್ದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿರುವ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ, ಇದಕ್ಕೆಲ್ಲ ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ದೂರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು,​ ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿರುವ ರೈತರು ಸುಮಾರು 500 ದಿನಗಳಿಂದ ಬಿಡದಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ. ಏಕಾಏಕಿ ಅಧಿಕಾರಿಗಳು ಸರ್ವೇ ಮಾಡಲು ಬಂದಿರುವುದನ್ನು ಕಂಡು ಸಹಜವಾಗಿಯೇ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರಾಜ್ಯ ಸರಕಾರದ ಬೇಜವಾಬ್ದಾರಿ ಮತ್ತು ಚಿತಾವಣೆಯೇ ಕಾರಣ ಎಂದರು.
ಆದಾಗ್ಯೂ ಕೆಟ್ಟ ಘಟನೆಗಳಿಗೆ ಅವಕಾಶ ಕೊಡಬೇಡಿ ಎಂದು ರೈತರಿಗೆ ಮನವಿ ಮಾಡುತ್ತೇನೆ. ಶಾಂತಿಯುತ ಹೋರಾಟ ಮುಂದುವರೆಸಿ. ಕಾನೂನಾತ್ಮಕ ಹೋರಾಟ ಮಾಡೋಣ. ನಿಮ್ಮ ನೋವು, ಆಕ್ರೋಶವನ್ನು ದುರುಪಯೋಗ ಮಾಡಿಕೊಳ್ಳಲು ಸರಕಾರಕ್ಕೆ ಅವಕಾಶ ಕೊಡಬೇಡಿ ಎಂದು ಮನವಿ ಮಾಡಿದರು.
ಪೊಲೀಸ್ ಇಲಾಖೆಗೆ ನಾನು ಹೇಳುವುದಿಷ್ಟೇ. ಶಾಂತಿಯುತವಾಗಿ ನಡೆಯುತ್ತಿರುವ ಹೋರಾಟಕ್ಕೆ ಸರಕಾರ ನಿಮ್ಮನ್ನೂ ದುರುಪಯೋಗಪಡಿಸಿಕೊಳ್ಳುತ್ತಿದೆ. ನೀವು ಯಾವುದೇ ಕಾರಣಕ್ಕೂ ಸರಕಾರದ ದರ್ಪಕ್ಕೆ ಹೆದರಿ ರೈತ ವಿರೋಧಿ ನೀತಿ ಅನುಸರಿಸಬೇಡಿ. ಒಂದು ವೇಳೆ ಹಾಗೆ ಮಾಡಿದರೆ ಸರಕಾರದ ಕೆಟ್ಟ ನಡವಳಿಕೆಯ ಪಾಲು ನಿಮಗೂ ಹಂಚಿಕೊಳ್ಳುವ ದಿನ ಬಂದೇ ಬರುತ್ತದೆ ಎಂದು ಎಚ್ಚರಿಸಿದ್ದಾರೆ.

Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ