Breaking News

ಸೆ. 24ರಂದು ಡಿಕೆಶಿ – ಮೋದಿ ಭೇಟಿ

Spread the love

ಬೆಂಗಳೂರು: ಇದೇ 24 ರಂದು ಸಿಎಂ ಡಿಕೆ ಶಿವಕುಮಾರ್‌ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತ ಕಸ್ತೂರಿ ರಂಗನ್ವ ರದಿಯ ವಿಚಾರದಲ್ಲಿ ಈ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದೆ.

ರಾಜ್ಯದ ಬಹುತೇಕ ತಾಲೂಕುಗಳಲ್ಲಿ ಮಳೆಯ ಕೊರತೆಯಿಂದ ಭೀಕರ ಬರಗಾಲ ಆವರಿಸಿದ್ದು, ರೈತರು ಕಂಗಾಲಾಗಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ತ್ವರಿತವಾಗಿ ಪರಿಹಾರ ನಿಧಿ ಬಿಡುಗಡೆ ಮಾಡುವಂತೆ ಹಾಗೂ ಬೆಳೆ ನಷ್ಟಕ್ಕೆ ಅಗತ್ಯ ನೆರವು ಕಲ್ಪಿಸುವಂತೆ ಪ್ರಧಾನಿಯವರಿಗೆ ವಿಸ್ತೃತ ಮನವಿ ಸಲ್ಲಿಸಲಿದ್ದಾರೆ.

ಪಶ್ಚಿಮ ಘಟ್ಟ ವ್ಯಾಪ್ತಿಯ ಜನವಸತಿ ಮತ್ತು ಕೃಷಿ ಭೂಮಿಗೆ ಧಕ್ಕೆಯಾಗುವಂತೆ ಕಸ್ತೂರಿ ರಂಗನ್ ವರದಿ ಜಾರಿಗೆ ಮುಂದಾಗಿರುವುದಕ್ಕೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಅಂಗೀಕರಿಸಲಾದ ವಿರೋಧ ನಿರ್ಣಯದ ಪ್ರತಿಯನ್ನು ಪ್ರಧಾನಿಯವರಿಗೆ ಹಸ್ತಾಂತರಿಸಿ, ಪರಿಸರ ಸೂಕ್ಷ್ಮ ವಲಯದ ಅಧಿಸೂಚನೆಯನ್ನು ಕೈಬಿಡುವಂತೆ ಸಿಎಂ ಒತ್ತಾಯಿಸಲಿದ್ದಾರೆ.


Spread the love

About Laxminews 24x7

Check Also

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿಕೆಶಿ

Spread the loveಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ