Breaking News

ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ

Spread the love

ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರವು ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ಗ್ರಾಮಗಳ ಸಶಕ್ತಿಕರಣಕ್ಕೆ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೂ 1.5 ಕೋಟಿ ರೂ. ಹಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೂ 1.5 ಕೋಟಿ ಹಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದ್ದು, ಅದರ ಜೊತೆಗೆ ಗ್ರಾಮಪಂಚಾಯಿತಳ ಅಭಿವೃದ್ಧಿಗೆ 31 ಸಾವಿರ ಕೋಟಿ ರೂ. ಹಣ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಗ್ರಾಮಪಂಚಾಯಿತಿಗಳಲ್ಲಿ ಈ ಹಿಂದೆ ನೀರಿಗಾಗಿ ಜಿಲ್ಲಾ ಪಂಚಾಯಿತಿಯಿಂದ ಹಣ ಪಡೆದುಕೊಳ್ಳಬೇಕಾಗಿತ್ತು. ಆದರೆ ಇನ್ಮುಂದೆ ಅದನ್ನು ತಪ್ಪಿಸಿ ನೇರವಾಗಿ ಗ್ರಾಮಪಂಚಾಯಿತಿಗಳಿಂದಲೇ ಅದಕ್ಕೆ ಹಣ ವ್ಯಯಿಸಲು ಅವಕಾಶವನ್ನು ಮಾಡಿಕೊಡಲಾಗಿದೆ. ಜೊತೆಗೆ ನರೇಗಾ ಹಣವನ್ನೂ ಸಹ ಗ್ರಾಮಪಂಚಾಯಿತಿಯಿಂದಲೇ ನೇರವಾಗಿ ಫಲಾನುಭವಿಗಳಿಗೆ ನೀಡಲು ಯೋಜಿಸಲಾಗಿದೆ ಎಂದರು.


Spread the love

About Laxminews 24x7

Check Also

ಅಡಿಕೆ ಸಾಗಿಸುತ್ತಿದ್ದ VRL ಲಾರಿ ತೋಟಕ್ಕೆ ಉರುಳಿ ಸಂಪೂರ್ಣ ಜಖಂ!

Spread the loveಶಿರಸಿ:ಶಿರಸಿಯಿಂದ ಹುಬ್ಬಳ್ಳಿಗೆ ಅಡಿಕೆ ಸಾಗಿಸುತ್ತಿದ್ದ VRL ಸಂಸ್ಥೆಗೆ ಸೇರಿದ ಲಾರಿಯೊಂದು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ