Breaking News

ಬಾವಿಗೆ ಬಿದ್ದು ಮಹಿಳೆ ಅನುಮಾನಾಸ್ಪದ ಸಾವು

Spread the love

ಚಿಕ್ಕಬಳ್ಳಾಪುರ: ಬಾವಿಗೆ ಬಿದ್ದು ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ  ತಾಲೂಕಿನ ಕುಡುವತಿ ಗ್ರಾಮದಲ್ಲಿ ನಡೆದಿದೆ.

ಕಲ್ಪನ (39) ಸಾವನ್ನಪ್ಪಿರುವ ಮಹಿಳೆ. ಕಳೆದ 20 ವರ್ಷಗಳ ಹಿಂದೆ ಕುಡುವತಿ ಗ್ರಾಮದ ತಮ್ಮೇಗೌಡ ಜೊತೆ ಕಲ್ಪನ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದರು. ಇತ್ತೀಚಿಗೆ ಅನಾರೋಗ್ಯದಿಂದ ಕಲ್ಪನ ಕುಡುವತಿ ಗ್ರಾಮದ ತವರು ಮನೆಯಲ್ಲಿದ್ದರು. ಕೌಟುಂಬಿಕ ಕಲಹ ಹಿನ್ನೆಲೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಆಂಧ್ರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು

Spread the loveಚಿಕ್ಕಬಳ್ಳಾಪುರ: ಬಾಡಿಗೆ ರೂಮ್‌ನಲ್ಲಿ ವಾಸವಾಗಿದ್ದ ಅಂತಿಮ ವರ್ಷದ ಇಂಜಿನಿಯರಿಂಗ್  ವಿದ್ಯಾರ್ಥಿ ನೇಣು ಬಿಗಿದುಕೊಂಡು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ