Breaking News

ಚಿಕ್ಕೋಡಿ ಸಿಟಿಇ ಸಂಸ್ಥೆಯ 10 ನೇ ತರಗತಿ ಸಿಬಿಎಸ್ಇ ವಿದ್ಯಾರ್ಥಿಗಳ ಅಮೋಘ ಸಾಧನೆ

Spread the love

10ನೇ ತರಗತಿ ಸಿಬಿಎಸ್ಇ ಫಲಿತಾಂಶದಲ್ಲಿ ಚಿಕ್ಕೋಡಿಯ ಸಿ ಟಿ ಇ ಸಂಸ್ಥೆಯ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸತತ 11ನೆ ವರ್ಷ ಶೇಕಡ 100%ರಷ್ಟು ಫಲಿತಾಂಶ.

ಸನ್ 2025 – 26 ನೇ ಸಾಲಿನ ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು; ಇದರಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಒಟ್ಟು 67 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು; ಅತ್ಯುನ್ನತ ದರ್ಜೆಯಲ್ಲಿ 40 ವಿದ್ಯಾರ್ಥಿಗಳು, ಉನ್ನತ ದರ್ಜೆಯಲ್ಲಿ 14 ವಿದ್ಯಾರ್ಥಿಗಳು, ದ್ವಿತೀಯ ದರ್ಜೆಯಲ್ಲಿ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕುಮಾರ ವಿಹಾನ ಎಸ್. ಮಾoಜರೆಕರ್ ಶೇಕಡ 93% ಅಂಕಗಳನ್ನು ಪಡೆದು ಪ್ರಥಮ ಸ್ಥಾನ, ಕುಮಾರ್ ಪ್ರತೀಕ್ ವಿ. ಚೌರಾಸಿಯಾ 89.4% ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ, ಕುಮಾರಿ ಪದ್ಮಪ್ರಿಯ ಆರ್. ಟಿಕ್ಕೆ ಹಾಗೂ ಕುಮಾರಿ ತನಿಷಾ ಇ. ಅನ್ಸಾರಿ ಶೇಕಡ 88% ಅಂಕಗಳನ್ನು ತೆಗೆದುಕೊಂಡು ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಶಾಲೆಯ ಆಡಳಿತಾಧಿಕಾರಿಗಳಾದ ಡಾ. ಮಿಥುನ್ ಎಸ್ ದೇಶಪಾಂಡೆ ಸರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಿ .ಟಿ. ಇ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲ ನಿರ್ದೇಶಕರು, ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಸಾಧನೆಯನ್ನು ಮೆಚ್ಚಿ ಶುಭಾಶಯ ಕೋರಿದ್ದಾರೆ.


Spread the love

About Laxminews 24x7

Check Also

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್

Spread the love ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ