Breaking News

ಚಿಕ್ಕೋಡಿ:ದ್ವಿತೀಯ ಪಿಯುಸಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Spread the love

ಚಿಕ್ಕೋಡಿ: ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ.

ಪಿಯು ಪರೀಕ್ಷೆಯನ್ನು ಬರೆಯುವದನ್ನು ಬಿಟ್ಟು ಜೀವನದ ಪರೀಕ್ಷೆಯನ್ನೆ ವಿದ್ಯಾರ್ಥಿನಿ ಮುಗಿಸಿದ್ದು ಹೃದಯಾಘಾತದಿಂದ ದ್ವಿತೀಯ ಪಿಯು ವಿದ್ಯಾರ್ಥಿನಿ ಭೂಮಿಕಾ ಮಾಳಂಗಿ(17) ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.

ಇಂದು PU ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿನಿ ಸ್ನಾನ ಮುಗಿಸಿಕೊಂಡು ಮನೆಯಿಂದ ಹೊರ ಬರುತ್ತಿದ್ದ ವೇಳೆಯೇ ಹೃದಯಾಘಾತ ಸಂಭವಿಸಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಪೋಷಕರು ಕರೆದೋಯ್ದರು ಮಾರ್ಗ ಮಧ್ಯೆಯೇ ಪಿಯು ವಿದ್ಯಾರ್ಥಿನಿ ಅಸುನೀಗಿದ್ದಾಳೆ.

ಘಟನೆಯಿಂದ ಗ್ರಾಮದಲ್ಲಿ ಶೋಕಮಯ ವಾತಾವರಣ ನಿರ್ಮಾಣವಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ಕೇಂದ್ರ ಸರ್ಕಾರದಿಂದ ಜನಪರ ಯೋಜನೆಗಳು ಜಾರಿ

Spread the loveಚಿಕ್ಕೋಡಿ : ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪಿ.ಎಂ ಆವಾಸ , ಜಲ ಜೀವನ, ಸ್ವಾಭಿಮಾನದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ