Breaking News

(ಬೆಳಗಾವಿ):ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರುನ್ನುಪೊಲೀಸರು ಬಂಧಿಸಿದ್ದಾರೆ.

Spread the love

ಚಿಕ್ಕೋಡಿ (ಬೆಳಗಾವಿ): ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳಗಾವಿ ಜಿಲ್ಲೆ ನಿಪ್ಪಾಣಿಯ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಿಪ್ಪಾಣಿ ಪಟ್ಟಣದ ಭೋಪಳೆ ಗಲ್ಲಿಯ ಶಾಬಾಜ್ ಮುನ್ನಾ ಸತಾರಿ (20) ಹಾಗೂ ರಿಯಾನ್ ಆಯಾಜ್ ಮಡ್ಡೆ (19) ಬಂಧಿತರು. ಈ ಯುವಕರು ಕಲ್ಲಂಗಡಿ ಹಣ್ಣುಗಳನ್ನ ಚರಂಡಿಯಲ್ಲಿ ತೊಳೆದು ಮಾರಾಟ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ವಿಡಿಯೋವನ್ನು ನೋಡಿದ್ದ ನಿಪ್ಪಾಣಿಯ ಕೆಲವರು ಆರೋಪಿಗಳನ್ನು ಗುರುತಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಆರೋಪಿಗಳು ಈ ಕೃತ್ಯವನ್ನು ಮಾರ್ಚ್ 28ರಂದು ಎಸಗಿದ್ದು, ವಿಡಿಯೋ ವೈರಲ್ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಬಸವೇಶ್ವರ ಚೌಕ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿಗಳನ್ನ ಬಂಧಿಸಿ ಹಿಂಡಲಗಾ ಜೈಲಿಗೆ ಕಳಿಸಿದ್ದಾರೆ.


Spread the love

About Laxminews 24x7

Check Also

John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್

Spread the love ಗದಗ: ಸಂವಿಧಾನ ಎತ್ತಿ ಹಿಡಿಯುವ, ನ್ಯಾಯಾಂಗದ ಬಗ್ಗೆ ಪ್ರಶ್ನಿಸಬಾರದು ಹಾಗೂ ಗೌರವದಿಂದ ಇರಬೇಕಾದ ಕೇಂದ್ರ ಸಚಿವ ಪ್ರಹ್ಲಾದ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ