Breaking News

ದೇಶದಲ್ಲಿ ಉತ್ತಮ ಆಡಳಿತ ನೀಡಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಆ ಕಾಲ ಮರುಕಳಿಸಲಿ: ಶಾಸಕ ಸತೀಶ ಜಾರಕಿಹೊಳಿ ಬಣ್ಣನೆ ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಕಾಂಗ್ರೆಸ್ ದೇಶಕ್ಕೆ ಮಾದರಿ

Spread the love

ಚಿಕ್ಕೋಡಿ:  ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ವರ್ಷ ಪೈರೈಸಿದ  ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಉತ್ತಮ ಆಡಳಿತ ನೀಡಿದ ಉದಾಹರಣೆ ಇದೆ. ಅದೇ ರೀತಿ ಮತ್ತೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಯಕ್ಸಂಬಾ ಪಟ್ಟಣದಲ್ಲಿ ಶುಕ್ರವಾರ ನಡೆದ ನೂತನ ಗ್ರಾಮ ಪಂಚಾಯತಿ ಸದಸ್ಯರಿಗೆ ಸತ್ಕಾರ ಹಾಗೂ ಅನ್ನಪೂರ್ಣೇಶ್ವರಿ ಸಂಸ್ಥೆ ಆಯೋಜಿಸಿರುವ ಹೊಲಿಗೆ ಯಂತ್ರ ವಿತರಣೆ ಸಮಾರಂಭದಲ್ಲಿ ಮಾತನಾಡಿದರು.

ಹಿಂದೆ ಕಾಂಗ್ರೆಸ್ ಅವಧಿಯಲ್ಲಿ ಪೆಟ್ರೋಲ್ ಡಿಸೇಲ್, ಗ್ಯಾಸ್ ಬೆಲೆಯಲ್ಲಿ ಒಂದು ರೂಪಾಯಿ ಹೆಚ್ಚಳವಾದ್ರು ಬೀದಿಗಳಿದು ಹೋರಾಟ ಮಾಡುತ್ತಿದ್ದರು. ಆದ್ರೆ ಈಗ ಪೆಟ್ರೋಲ್ ಡಿಸೇಲ್ ಬೆಲೆ ಗಗನಕ್ಕೇರಿತ್ತಿದೆ. ಪರಿಸ್ಥಿತಿ ಯಾವ ಮಟ್ಟಿಗೆ ಹೋಗಿದೆ ಎಂಬುವುದನ್ನು ನೀವು ಯೋಚಿಸಬೇಕು ಎಂದರು.

ರಕಾಶ ಹುಕ್ಕೇರಿ ಅವರು, ಸರ್ಕಾರದ ಯೋಜನೆಯಷ್ಟೇ ಅಲ್ಲದೇ ತಮ್ಮ ಸ್ವಂತ ಹಣದಲ್ಲಿಯೂ ಚಿಕ್ಕೋಡಿ, ಕಾಗವಾಡ ಭಾಗಗಳಲ್ಲಿ ಅನೇಕ ಸೌಲಭ್ಯ ಒದಗಿಸಿದ್ದಾರೆ. ಬಡವರಪರ ಕಾಳಜಿಯುಳ್ಳು ಪ್ರಕಾಶ ಹುಕ್ಕೇರಿ ಅವರ ಈ ಭಾಗಕ್ಕೆ ಅನೇಕ ಕೊಡುಗೆ ನೀಡಿದ್ದಾರೆ. 329 ಯುವತಿಯರಿಗೆ ಹೊಲಿಗೆ ಯಂತ್ರ ಕಲ್ಪಿಸಿದ್ದು, ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ನೂತನವಾಗಿ ಗ್ರಾಪಂಗೆ ಆಯ್ಕೆಯಾದ ಸದಸ್ಯರು ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಬೇಕು. ಅಲ್ಲದೇ ಗ್ರಾಮದ ಅಭಿವೃದ್ದಿಗೆ ‌ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾತನಾಡಿ, ಗ್ರಾಮದ ಜನತೆ ನಿಮ್ಮ ಮೇಲೆ ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡು ನೂತನ ಸದಸ್ಯರನ್ನು ಆಯ್ಕೆ ಮಾಡಿದ್ದಾರೆ. ಗ್ರಾಮದ ಅಭಿವೃದ್ಧಿಗೆ ಸದಸ್ಯರು ಶ್ರಮಿಸಬೇಕು ಎಂದ ಅವರು, ಪ್ರಕಾಶ ಹುಕ್ಕೇರಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಚಿಕ್ಕೋಡಿ ಸದಲಗಾ, ಕಾಗವಾಡ ಗ್ರಾಪಂ ನೂತನ ಸದಸ್ಯರಿಗೆ ಸತ್ಕರಿಸಲಾಯಿತು.

ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ, ಶಾಸಕಬಗಣೇಶ್ ಹುಕ್ಕೇರಿ , ಕಾಕಾ ಸಾಹೇಬ್ ಪಾಟೀಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮ ಣರಾವ್ ಚಿಂಗಳೆ,ಸುನೀಲ್  ಹನಮಣ್ಣವರ, ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ , ಸತೀಶ ಕುಲಕರ್ಣಿ ,ಅನೀಲ ಪಾಟೀಲ , ಬೆಳಗಾವಿ  ಗ್ರಾಮೀಣ ಕಾಂಗ್ರೆಸ್  ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಮುಂತಾದವರು ಇದ್ದರು.


Spread the love

About Laxminews 24x7

Check Also

ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ

Spread the loveಚಾಮರಾಜನಗರ, ಫೆಬ್ರವರಿ 05: ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ