ಚಿಕ್ಕೋಡಿ : ಪಟ್ಟಣದ 23 ವಾರ್ಡುಗಳಿಗೆ ದೈನಂದಿನ ಅವಶ್ಯಕ ತರಕಾರಿ, ಹಣ್ಣು ಮತ್ತು ದಿನಸಿ ವಸ್ತುಗಳನ್ನು ಜನರ ಮನೆ ಬಾಗೀಲಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ. ಅನಾವಶ್ಯಕವಾಗಿ ಮನೆಯಿಂದ ಯಾರು ಹೊರಗೆ ಬರಬಾರದು ಎಂದು ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಮನವಿ ಮಾಡಿದ್ದಾರೆ.
ಪ್ರತಿ ದಿನ ಬೆಳಗ್ಗೆ 6 ಗಂಟೆಯಿಂದ 9 ಗಂಟೆವರೆಗೆ ಮತ್ತು ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಹಣ್ಣು ಮತ್ತು ತರಕಾರಿ ಮಾರುವವರು ಜನರ ಮನೆ ಹತ್ತಿರವೇ ಬರುತ್ತಾರೆ. ಆ ಸಂದರ್ಭದಲ್ಲಿ ತೆಗೆದುಕೊಳ್ಳಬೇಕು. ತರಕಾರಿ ಕೊಂಡುಕೊಳ್ಳುವಾಗಲೂ ಸಹ ಜನರು ಗುಂಪು ಗುಂಪಾಗಿ ನಿಲ್ಲಬಾರದು. ಮುಂಜಾಗೃತಾ ಕ್ರಮವಾಗಿ ಒಬ್ಬರಿಂದ ಒಬ್ಬರಿಗೆ ಕನಿಷ್ಠ ಒಂದು ಮೀಟರ್ ಅಂತರದಲ್ಲಿ ನಿಂತು ಹಣ್ಣು ಮತ್ತು ತರಕಾರಿ ಖರೀದಿ ಮಾಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ದಿನಸಿ ಅಂಗಡಿ ಮಾಲೀಕರು ಗ್ರಾಹಕರಿಂದ ಅವರಿಗೆ ಬೇಕಾದ ವಸ್ತಗಳ ಯಾದಿ ಪಡೆದು ಅವರ ಮನೆಗೆ ಮುಟ್ಟಿಸುವ ವ್ಯವಸ್ಥೆ ಮಾಡುತ್ತಾರೆ ಎಂದು ಹೇಳಿದ್ರು.