Breaking News

ಮೊದಲ ಮಹಡಿಯಿಂದ ಬಿದ್ದು ಮಗು ದಾರುಣ ಸಾವು

Spread the love

ನೆಲಮಂಗಲ: ಆಟವಾಡುತ್ತಿದ್ದ ಮಗು ಮೊದಲನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಟಿ.ದಾಸರಹಳ್ಳಿ  ನಿವಾಸಿ ನವೀನ್ ಕುಮಾರ್ ಹಾಗೂ ಕಾವ್ಯ ದಂಪತಿ ಪುತ್ರ ದೀಕ್ಷಿತ್ (2) ಮೃತಪಟ್ಟ ಮಗು. ಆಟವಾಡುವ ವೇಳೆ ಮೆಟ್ಟಿಲ ಮೇಲಿಂದ ಮಗು ಉರುಳಿ ಬಿದ್ದಿದೆ. ಕೂಡಲೇ ಪೋಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. 24 ಗಂಟೆಗಳ ಕಾಲ ಕೋಮಾದಲ್ಲಿದ್ದ ಮಗು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

ನವೀನ್ ಕುಮಾರ್ ಹಾಗೂ ಕಾವ್ಯ ದಂಪತಿ ಎರಡು ದಿನದ ಹಿಂದೆ ತೋಟದಗುಡ್ಡದಹಳ್ಳಿ ಸಂಬಂಧಿಕರ ಮನೆಗೆ ಬಂದಿದ್ದರು ಎಂದು ತಿಳಿದುಬಂದಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಶವಾಗಾರಕ್ಕೆ ಮಗುವಿನ ಮೃತದೇಹ ರವಾನಿಸಲಾಗಿದೆ.


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ