ಕೋಲಾರ: ಮನೆ ಬಳಿಯ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿದ ಘಟನೆ ಕೋಲಾರದ ಕಾರಂಜಿಕಟ್ಟೆ ಬಡಾವಣೆಯ 10ನೇ ಕ್ರಾಸ್ನಲ್ಲಿ ನಡೆದಿದೆ.
ನಗರದ ವಿಕಾಸ್ ಹಾಗೂ ಹಂಸ ದಂಪತಿ ಪುತ್ರ ಯಶಸ್ (3) ಮೃತಪಟ್ಟ ಮಗು. ಮಗು ಅಂಗಳದಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಸಂಪ್ಗೆ ಬಿದ್ದಿದೆ. ಈ ವೇಳೆ ತಕ್ಷಣ ನೀರಿನಿಂದ ಮಗುವನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಷ್ಟರಲ್ಲೇ ಮಗು ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಗಲ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Laxmi News 24×7