Breaking News

ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರವನ್ನೂ ನೀಡಬೇಕು

Spread the love

ಖಾನಾಪುರ: ದೇಶದ ಭವಿಷ್ಯ ಕಟ್ಟುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಸಂಸ್ಕಾರವನ್ನೂ ನೀಡುವಂತೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ ಜಾರಕಿಹೊಳಿ ಹೇಳಿದರು.
ಯಮಕನಮರಡಿ ಮತಕ್ಷೇತ್ರದ ಅಲದಾಳ ಗ್ರಾಮದಲ್ಲಿ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ೨೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಸಚಿವ ಸತೀಶ ಜಾರಕಿಹೊಳಿ ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು  ಆದ್ಯತೆ ನೀಡಿದ್ದಾರೆ. ಪಾಲಕರು ಸರ್ಕಾರಿ ಸೌಲಭ್ಯಗಳ ಸದುಪಯೋಗ ಪಡೆಯಬೇಕು ಎಂದರು.
ಹುಕ್ಕೇರಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೊಳೆಪ್ಪ ಎಚ್., ಭರಮಾ ಹಳ್ಳೂರಿ ಮಾತನಾಡಿದರು. ದಯಾನಂದ ಪಾಟೀಲ, ಬಸವರಾಜ ದೇಸಾಯಿ, ಈರಪ್ಪ ಪಾಟೀಲ, ಬಸಪ್ಪ ಗುರವ, ಈರಣ್ಣ ದೇಸಾಯಿ, ಅಂಗನವಾಡಿ ಮೇಲ್ವಿಚಾರಕಿ ಆಯೇಷಾ ಮುಲ್ಲಾ, ಕಾರ್ಯಕರ್ತೆ ಲಕ್ಷ್ಮಿ ಇಟಗಿ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ