Breaking News

ಕೋಲ್ಡ್ ಸ್ಟೋರೇಜ್‌ನಲ್ಲಿದ್ದ ಲಕ್ಷಾಂತರ ಮೌಲ್ಯದ ಮೆಣಸಿನಕಾಯಿ ಮಾಯ!

Spread the love

ಹಾವೇರಿ: ವಿಶ್ವಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ  ಮಾರುಕಟ್ಟೆಯಲ್ಲಿ ರೈತನೊಬ್ಬನಿಗೆ ದಲ್ಲಾಳಿಯೊಬ್ಬ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರೈತ ಮಹಾದೇವಪ್ಪ ಎಂಬುವವರ ಮೋಸಕ್ಕೊಳಗಾದವರು. ಬೆಳೆದ ಮೆಣಸಿನಕಾಯಿಗೆ ಸೂಕ್ತ ಬೆಲೆ ಸಿಗಲಿಲ್ಲವೆಂಬ ಕಾರಣಕ್ಕೆ, ದಲ್ಲಾಳಿ ನಾಗಪ್ಪ ಹಡಗಲಿ ಎಂಬಾತನ ಸಹಾಯದಿಂದ 2023ರಲ್ಲಿ ತಮ್ಮ 363 ಚೀಲ ಮೆಣಸಿನಕಾಯಿಯನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇರಿಸಿದ್ದರು. ಆದರೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾದಾಗ ಮಾರಾಟ ಮಾಡಲು ಬಂದ ರೈತನಿಗೆ, ಅತ್ತ ಮೆಣಸಿನಕಾಯಿಯೂ ಇಲ್ಲ, ಹಣವೂ ಇಲ್ಲದಂತಾಗಿದೆ. ದಲ್ಲಾಳಿ ನಮ್ಮ ಗಮನಕ್ಕೆ ಬಾರದೆ ಮೆಣಸಿನಕಾಯಿಯನ್ನು ಮಾರಾಟ ಮಾಡಿದ್ದಾನೆ ಎಂದು ರೈತ ಕುಟುಂಬ ಆರೋಪಿಸಿದೆ.

ರೈತ ಮಹಾದೇವಪ್ಪ ಅವರು 2023ರಲ್ಲಿ ದರ ಕಡಿಮೆ ಇದ್ದಿದ್ದರಿಂದ ಮೆಣಸಿನಕಾಯಿಯನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇಟ್ಟು ಹೋಗಿದ್ದರು. ಇತ್ತೀಚೆಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಬಂದಿದ್ದರಿಂದ, ಅದನ್ನು ಮಾರಾಟ ಮಾಡಲು ಬಂದಾಗ ಮೆಣಸಿನಕಾಯಿ ಚೀಲಗಳು ನಾಪತ್ತೆಯಾಗಿರುವುದು ಕಂಡು ಶಾಕ್​​ ಆಗಿದ್ದಾರೆ.

ತಿಪ್ಪೇಸ್ವಾಮಿ ಮೆಣಸಿನಕಾಯಿ ಏಜೆನ್ಸಿಯವರು ರೈತನಿಗೆ ಆರಂಭದಲ್ಲಿ ಕೂಲಿ ಕಾರ್ಮಿಕರಿಗೆ ನೀಡುವ ನೆಪದಲ್ಲಿ ಸ್ವಲ್ಪ ಹಣ ನೀಡಿದ್ದರೂ, ನಂತರದ ದಿನಗಳಲ್ಲಿ ರೈತನ ಹೆಸರಿನಲ್ಲಿರುವ ಸುಮಾರು 50 ಲಕ್ಷ ರೂ ಮೌಲ್ಯದ ಮೆಣಸಿನಕಾಯಿಯನ್ನು ರೈತನ ಅನುಮತಿಯಿಲ್ಲದೆ ಮಾರಾಟ ಮಾಡಿದ್ದಾರೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಮೂಲ ದಾಖಲೆಗಳನ್ನ ತೆಗೆದುಕೊಂಡು ನಮಗೆ ಮೋಸ ಮಾಡಿದ್ದಾರೆ. ನ್ಯಾಯ ಬೇಕು ಅಂತಾ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ರೈತ ಮಹಾದೇವಪ್ಪ ಪ್ರಕರಣ ದಾಖಲಿಸಿದ್ದಾರೆ.


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ