Breaking News
Home / new delhi / ಸುಳ್ಳು ಮಾಹಿತಿಗಳನ್ನೇ ನೀಡಿ ಪ್ರಪಂಚದೆಲ್ಲೆಡೆ ಕೊರೊನಾ ವೈರಸ್ ಹರಡಲು ಕಾರಣವಾದ ಚೀನಾ

ಸುಳ್ಳು ಮಾಹಿತಿಗಳನ್ನೇ ನೀಡಿ ಪ್ರಪಂಚದೆಲ್ಲೆಡೆ ಕೊರೊನಾ ವೈರಸ್ ಹರಡಲು ಕಾರಣವಾದ ಚೀನಾ

Spread the love

ನ್ಯೂಯಾರ್ಕ್: ಸುಳ್ಳು ಮಾಹಿತಿಗಳನ್ನೇ ನೀಡಿ ಪ್ರಪಂಚದೆಲ್ಲೆಡೆ ಕೊರೊನಾ ವೈರಸ್ ಹರಡಲು ಕಾರಣವಾದ ಚೀನಾ ಆರಂಭದಲ್ಲೇ ಮಾಡಿದ ಮತ್ತೊಂದು ಎಡವಟ್ಟು ಈಗ ಬೆಳಕಿಗೆ ಬಂದಿದೆ.

ಹೌದು. ವ್ಯಕ್ತಿಯಿಂದ ವ್ಯಕ್ತಿಗೆ ಈ ವೈರಸ್ ಹರಡುತ್ತಿದೆ ಎನ್ನುವುದು ತಿಳಿದಿದ್ದರೂ ಚೀನಾ 6 ದಿನಗಳ ಕಾಲ ಈ ವಿಚಾರವನ್ನು ಮುಚ್ಚಿಟ್ಟಿತ್ತು ಎಂಬುದಾಗಿ ಎಎಫ್‍ಪಿ ವರದಿ ಮಾಡಿದೆ.

ಈ ಸಂಬಂಧ ಎಎಫ್‍ಪಿಗೆ ದಾಖಲೆಗಳು ಲಭ್ಯವಾಗಿದ್ದು, ವುಹಾನ್ ನಲ್ಲಿ ಸೋಂಕು ಮನುಷ್ಯನಿಂದ ಮನುಷ್ಯನಿಗೆ ಹರಡುತ್ತಿರುವ ವಿಚಾರ ಜ.14ರಂದೇ ಆರೋಗ್ಯ ಅಧಿಕಾರಿಗಳಿಗೆ ತಿಳಿದಿತ್ತು. ಆದರೆ ಅವರು ಈ ವಿಚಾರವನ್ನು ಮುಚ್ಚಿಟ್ಟಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಿದೆ.

ಈ ಮಧ್ಯೆ ವುಹಾನ್ ನಲ್ಲಿ ಔತಣಕೂಟವನ್ನು ಆಯೋಜನೆ ಆಗಿತ್ತು. ಈ ಔತಣಕೂಟದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಇದಾದ ಬಳಿಕ ನಡೆದ ಹೊಸ ವರ್ಷವಾದ ಲುನಾರ್ ಹಬ್ಬದಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ವಿಶ್ವದ ಹಲವು ದೇಶಗಳಿಂದ ಈ ಹಬ್ಬದಲ್ಲಿ ಪಾಲ್ಗೊಳ್ಳಲು ಪ್ರವಾಸಿಗರು ಆಗಮಿಸಿದ್ದರು. ಪರಿಣಾಮ ಜ.21ರ ಒಳಗಡೆ ಸೋಂಕು 3 ಸಾವಿರ ಮಂದಿಗೆ ಹರಡಿತು ಎಂದು ಹೇಳಿದೆ.

ಚೀನಾ ಈ ವಿಚಾರವನ್ನು ಮುಚ್ಚಿಟ್ಟ ಪರಿಣಾಮ ಸೋಂಕು ವಿಶ್ವದೆಲ್ಲೆಡೆ ಹರಡಿ ಲಕ್ಷಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ

ಆರಂಭದಲ್ಲೇ ಚೀನಾದ ಡಾ. ಲಿ ವೆನ್ಲಿಯಾಂಗ್ ಈ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡಿದ್ದರು. ಸಾರ್ಸ್ ರೀತಿಯ ಹೊಸ ರೋಗ ಲಕ್ಷಣ ಹೊಂದಿರುವ 7 ಮಂದಿ ರೋಗಿಗಳನ್ನು ನಾನು ಗುರುತಿಸಿದ್ದೇನೆ. ಹೀಗಾಗಿ ಸುರಕ್ಷಾ ಸಾಧನಗಳನ್ನು ಬಳಸಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಕೊಂಡಿದ್ದರು. ಈ ಜಾಗೃತಿ ಸುದ್ದಿಗಳನ್ನು ಹರಡಿದ್ದಕ್ಕಾಗಿ ಜನವರಿ 1 ರಂದು ಡಾ. ಲಿ ವೆನ್ಲಿಯಾಂಗ್ ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಖಂಡಿಸಲಾಗಿತ್ತು. ವುಹಾನ್ ಮುನ್ಸಿಪಾಲ್ ಆರೋಗ್ಯ ಆಯೋಗ ಪ್ರಾಥಮಿಕ ತನಿಖೆಯಲ್ಲಿ ಮನುಷ್ಯರಿಂದ ಮನುಷ್ಯರಿಗೆ ಹರಡುವ ಬಗ್ಗೆ ಯಾವುದೇ ಪುರಾವೆಗಳು ಸಿಕ್ಕಿಲ್ಲ ಎಂದು ಹೇಳಿತ್ತು.

ಚೀನಾದ ಹೇಳಿಕೆಯನ್ನು ಜನವರಿ 14ರಂದು ವಿಶ್ವ ಆರೋಗ್ಯ ಸಂಸ್ಥೆ ಕೂಡಾ ಸಮರ್ಥಿಸಿಕೊಂಡು ಪ್ರಾಥಮಿಕ ತನಿಖೆಯಲ್ಲಿ ಈ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತಿರುವ ಬಗ್ಗೆ ಯಾವುದೇ ದಾಖಲೆ ಸಿಕ್ಕಿಲ್ಲ ಎಂದು ಟ್ವೀಟ್ ಮಾಡಿತ್ತು. ಇದಾದ ಬಳಿಕ ಫೆ.6 ರಂದು ಕೊರೊನಾ ವೈರಸ್ ಬಗ್ಗೆ ಮೊದಲ ಬಾರಿಗೆ ಎಚ್ಚರಿಕೆ ನೀಡಿದ್ದ ವೈದ್ಯ ಲಿ ವೆನ್ಲಿಯಾಂಗ್ ಮೃತಪಟ್ಟಿದ್ದರು.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ