Home / ಜಿಲ್ಲೆ / ಚಿತ್ರದುರ್ಗ / ಚಿತ್ರದುರ್ಗ ಜಿಲ್ಲೆಯಲ್ಲಿ ಓರ್ವರಿಗೆ ಕೋವಿಡ್-19 ಸೊಂಕು , ಭೀಮಸಮುದ್ರ ಸುತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ಕಟ್ಟೆಚ್ಚರ : ವಿನೋತ್ ಪ್ರಿಯಾ

ಚಿತ್ರದುರ್ಗ ಜಿಲ್ಲೆಯಲ್ಲಿ ಓರ್ವರಿಗೆ ಕೋವಿಡ್-19 ಸೊಂಕು , ಭೀಮಸಮುದ್ರ ಸುತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ಕಟ್ಟೆಚ್ಚರ : ವಿನೋತ್ ಪ್ರಿಯಾ

Spread the love

ಚಿತ್ರದುರ್ಗ, (ಮಾ. 24) : ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರದಲ್ಲಿ ಓರ್ವ ಮಹಿಳೆಗೆ ಕೋವಿಡ್-19 ಸೋಂಕು ತಾತ್ಕಾಲಿಕ ಪಾಸಿಟಿವ್ ಆಗಿದೆ ಎಂಬುದಾಗಿ ವರದಿ ಬಂದಿದ್ದು, ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಭೀಮಸಮುದ್ರದ 5 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಬಫರ್ ಜೋನ್ ಎಂದು ಗುರುತಿಸಿ, ಈ ವ್ಯಾಪ್ತಿಯಲ್ಲಿ ಸೋಂಕು ಹರಡದಂತೆ ಸಂಪೂರ್ಣ ಕಟ್ಟೆಚ್ಚರ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಸ್ಥಿತಿಗತಿ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.

ಭೀಮಸಮುದ್ರದ ಓರ್ವ ಮಹಿಳೆ (35 ವರ್ಷ) ಇವರಿಗೆ ಕೋವಿಡ್-19 ಸೋಂಕು ತಾತ್ಕಾಲಿಕ ಪಾಸಿಟೀವ್ ಎಂಬ ವರದಿ ಬಂದಿದೆ.  ಇವರು ಕಳೆದ ಮಾ. 20 ರಂದು ಆಗಮಿಸಿದ್ದು, ಇವರು ಗಯಾನ ದೇಶದಿಂದ ನ್ಯೂಯಾರ್ಕ್‍ಗೆ ನಂತರ ದೆಹಲಿಗೆ ವಿಮಾನದ ಮೂಲಕ ಆಗಮಿಸಿದ್ದರು.

ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ಮಾಡಿದ ಥರ್ಮಲ್ ಸ್ಕ್ರೀನಿಂಗ್‍ನಲ್ಲಿ ಯಾವುದೇ ರೋಗ ಲಕ್ಷಣ ಕಂಡುಬಂದಿರಲಿಲ್ಲ.  ಹೀಗಾಗಿ ದೆಹಲಿಯಿಂದ ತಮ್ಮ ಇಬ್ಬರು ಮಕ್ಕಳು ಹಾಗೂ ಅವರ ತಂದೆ ಮತ್ತು ಕುಟುಂಬದ ಇತರೆ ಇಬ್ಬರು ಸದಸ್ಯರೊಂದಿಗೆ ಒಟ್ಟಿಗೆ ವಿಮಾನದಲ್ಲಿ ಆಗಮಿಸಿದ್ದರು.

ಮಾ. 22 ರಂದು ಒಟ್ಟು 04 ಜನರ ಗಂಟಲು ದ್ರವ ಮತ್ತು ರಕ್ತ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು.  ಇದರಲ್ಲಿ ಮೂವರಿಗೆ ನೆಗಟೀವ್ ಹಾಗೂ ಒಬ್ಬರ ವರದಿ ತಾತ್ಕಾಲಿಕ ಪಾಸಿಟೀವ್ ಎಂದು ಬಂದಿದೆ.  ಹೀಗಾಗಿ ಸೋಂಕಿತರೂ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರನ್ನೂ ಹೋಂ ಕ್ವಾರಂಟೈನ್‍ನಲ್ಲಿ ಇರಿಸಲಾಗಿದ್ದು, ಪಾಸಿಟಿವ್ ವರದಿ ಬಂದಿರುವ ಮಹಿಳೆಗೆ ದಾವಣಗೆರೆಯ ಆಸ್ಪತ್ರೆಗೆ ಸ್ಥಳಾಂತರಿಸಲು ಮಹಿಳೆಯ ತಂದೆ ಇಚ್ಛೆ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ಸರ್ಕಾರದ ಗಮನಕ್ಕೆ ತಂದು ಇವರನ್ನು ದಾವಣಗೆರೆಯ ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು.  ಸೋಂಕಿತರ ಸಂಪೂರ್ಣ ಟ್ರ್ಯಾವೆಲ್ ಹಿಸ್ಟರಿ ಹಾಗೂ ಇವರೊಂದಿಗೆ ಮೊದಲನೆ ಹಾಗೂ ಎರಡನೆ ಸಂಪರ್ಕಿತರ ವಿವರವನ್ನು ವಿಳಾಸ ಸಹಿತ ಪತ್ತೆ ಮಾಡಲು ಈಗಾಗಲೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಜವಾಬ್ದಾರಿ ನೀಡಲಾಗಿದೆ.  ಸಂಪೂರ್ಣ ವಿವರ ಪಡೆದು, ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಭೀಮಸಮುದ್ರ 5 ಕಿ.ಮೀ. ಬಫರ್ ಜೋನ್ : ಭೀಮಸಮುದ್ರದ ಓರ್ವರಿಗೆ ಕೋವಿಡ್ 19 ತಾತ್ಕಾಲಿಕ ಪಾಸಿಟಿವ್ ಎಂದು ವರದಿ ಬಂದ ಹಿನ್ನೆಲೆಯಲ್ಲಿ ಈ ಗ್ರಾಮದ ವ್ಯಾಪ್ತಿಯಲ್ಲಿ 5 ಕಿ.ಮೀ. ಪ್ರದೇಶವನ್ನು ಬಫರ್ ಜೋನ್ ಎಂದು ಘೋಷಿಸಲಾಗಿದ್ದು, ಈ ವ್ಯಾಪ್ತಿಯ ಗಡಿಯನ್ನು ನಿಗದಿಪಡಿಸಿ, ಈ ವ್ಯಾಪ್ತಿಯ ಎಲ್ಲ ಮನೆಯ ಜನರಿಗೆ ಸಂಪೂರ್ಣವಾಗಿ ಹೋಂ ಕ್ವಾರಂಟೈನ್ ಮಾಡಲು ಸೂಚನೆ ನೀಡಲಾಗಿದೆ.

ಅಲ್ಲದೆ ಈ ವ್ಯಾಪ್ತಿಯೊಳಗೆ ಇತರೆ ಯಾರೂ ಬರುವುದಾಗಲಿ, ಅಥವಾ ಇಲ್ಲಿಂದ ಹೊರಗಡೆ ಹೋಗುವುದಾಗಲಿ ಮಾಡಲು ಅವಕಾಶ ಇರುವುದಿಲ್ಲ. ಜನರೂ ಕೂಡ ಮನೆಯಿಂದ ಹೊರಗಡೆ ಬರದೆ, ಮನೆಯಲ್ಲಿಯೇ ಹೋಂ ಕ್ವಾರಂಟೈನ್‍ನಲ್ಲಿ ಇರಬೇಕು.  ಇಲ್ಲಿನ ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಮಾಡಲಿದೆ.  ಅಲ್ಲದೆ ಇಲ್ಲಿನ ಜನರ ಮೇಲಿ ನಿಗಾ ವಹಿಸಲು ಅಗತ್ಯ ಪೊಲೀಸ್ ಬಂದೋಬಸ್ತ್ ಕೂಡ ಹಾಕಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ. ಕುಮಾರಸ್ವಾಮಿ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Spread the love ಬೆಂಗಳೂರು: ಒಂದು ತಿಂಗಳಿಂದ ನಡೆಯುತ್ತಿದ್ದ ಅಬ್ಬರದ ಪ್ರಚಾರಕ್ಕೆ ಬುಧವಾರ ತೆರೆ ಬೀಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ