ಚಾಮರಾಜನಗರ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅನೇಕರು ತುಂಬಾ ಸರಳವಾಗಿ ಮದುವೆಯಾಗುತ್ತಿದ್ದಾರೆ. ಇದೀಗ ರೈತ ಮುಖಂಡ ಕೊರೊನಾ ಲಾಕ್‍ಡೌನ್‍ನಿಂದಾಗಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಡಬೂರು ನಿವಾಸಿ ಮಂಜು ಅದೇ ಗ್ರಾಮದ ಮಾದಲಾಂಬಿಕೆ ವಧುವಿನ ಜೊತೆ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಷ್ಟೇ ಅಲ್ಲದೇ ವರ ಮಂಜು ತಮ್ಮ ಮದುವೆಗೆಂದು ಕೂಡಿಟ್ಟಿದ್ದ ಹಣವನ್ನು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ವರ ಮಂಜು ಮತ್ತು ವಧು ಮಾದಲಾಂಬಿಕೆ ಕಡಬೂರು ಗ್ರಾಮದಲ್ಲೇ ಕುಟುಂಬದವರ ಸಮ್ಮುಖದಲ್ಲಿ ಶಾಸ್ತ್ರೋಸ್ತವಾಗಿ ಸರಳವಾಗಿ ಮದುವೆಯಾಗಿದ್ದಾರೆ. ನಂತರ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ 1 ಲಕ್ಷ ರೂ. ಮತ್ತು ಗ್ರಾಮದ ದೇವಸ್ಥಾನದ ಅಭಿವೃದ್ಧಿಗೆ 2 ಲಕ್ಷ ರೂಪಾಯಿಯನ್ನು ದೇಣಿಗೆ ನೀಡಿದ್ದಾರೆ. ಈ ಮೂಲಕ ಮದುವೆ ಖರ್ಚಿನ ಹಣವನ್ನು ಕೋವಿಡ್ ಪರಿಹಾರ ನಿಧಿಗೆ ನೀಡಿ ರೈತ ಮುಖಂಡ ಮಾದರಿಯಾಗಿದ್ದಾರೆ.