ಚಿಂಚೋಳಿ: ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ ಅಕ್ಕ, ತಂಗಿ ಇಬ್ಬರೂ ಏಕಕಾಲಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಐಶ್ವರ್ಯ ವಿಶ್ವನಾಥ ಸುತಾರ (20) ಹಾಗೂ ಸಾರಿಕಾ ವಿಶ್ವನಾಥ ಸುತಾರ (17) ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ.
ಕುಟುಂಬದ ಮುಖ್ಯಸ್ಥ ವಿಶ್ವನಾಥ ಸುತಾರ ಅವರು ಐನಾಪುರ ಗ್ರಾಮದಲ್ಲಿಯೇ ಚಹಾ ಅಂಗಡಿ ನಡೆಸುತ್ತಿದ್ದಾರೆ. ಅವರಿಗೆ ಒಟ್ಟು ಐವರವು ಹೆಣ್ಣುಮಕ್ಕಳಿದ್ದರು. ಈಗಾಗಲೇ ಮೂವರ ಮದುವೆಯಾಗಿದೆ. ಐದನೆಯವಳಾದ ಸಾರಿಕಾಗೆ ಒಂದೂವರೆ ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು. ಆದರೆ, ನಾಲ್ಕನೆಯವಳಾದ ಐಶ್ವರ್ಯ ಇನ್ನೂ
ಕುವರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಬ್‍ಇನ್‍ಸ್ಪೆಕ್ಟರ್ ರಾಜಶೇಖರ ರಾಠೋಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7