Breaking News

ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು.!

Spread the love

ಕಲಬುರಗಿ: ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್‌ ಕಾನ್‌ಸ್ಟೆಬಲ್‌ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ್ (ಬಿ) ಗ್ರಾಮದ ಬಳಿ ನಡೆದಿದೆ.

ಧರೆಪ್ಪ ಅಂಜುಟಗಿ, (26) ಮೃತ KSRP ಪೇದೆ. ಧರೆಪ್ಪ ಕಲಬುರಗಿಯಿಂದ ಶಿರವಾಳ್ ಗ್ರಾಮಕ್ಕೆ ಹೊರಟಿದ್ದರು. ಗೊಬ್ಬರ (ಬಿ) ಗ್ರಾಮದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಪೊಲೀಸ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ತಮ್ಮರಾಯ ಪಾಟೀಲ್, ಸಿಪಿಐ ಲಖನ್ ಮಸಗಪ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಲ ಗಾಣಗಾಪೂರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ

Spread the loveಬೆಳಗಾವಿ: ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಈಗಾಗಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ