Breaking News

ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ 50 ಸಾವಿರ ರೂ. ನೀಡಿದ ಬೆಳಗಾವಿ ಎಸ್‍ಪಿ…………

Spread the love

ಚಿಕ್ಕೋಡಿ: ಸಾಲ ಬಾದೆ ತಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಬೆಳಗಾವಿ ಎಸ್‍ಪಿ ಹಣ ಸಹಾಯ ಮಾಡಿದ್ದಾರೆ.

ಒಂದು ತಿಂಗಳ ಹಿಂದೆ ತಾನು ಕೊರೆಸಿದ ಕೊಳವೆ ಬಾವಿಯಲ್ಲಿ ನೀರು ಬಾರದ ಕಾರಣ ಸಾಲದ ಸುಳಿಗೆ ಸಿಲುಕಿ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಕುಟುಂಬದ ಸ್ಥಿತಿ ಚಿಂತಾಜನಕವಾಗಿರುವುದನ್ನು ಕಂಡು ಅವರ ಕುಟುಂಬದ ಆಸರೆಗಾಗಿ ಹಾಗೂ ಇಬ್ಬರ ಮಕ್ಕಳ ಶಿಕ್ಷಣಕ್ಕಾಗಿ ಅನಕೂಲವಾಗಲು ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ 50 ಸಾವಿರ ಧನ ಸಹಾಯ ನೀಡಿ ಮಾನವೀಯತೆ ಮೆರೆದಿದ್ದಾರೆ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಲ್ತಾನಪೂರ ಗ್ರಾಮದ ರೈತ ಲಕ್ಕಪ್ಪ ಸಂಗಪ್ಪ ದೊಡ್ಡಮನಿ ಅವರು ತಿಂಗಳ ಹಿಂದೆ ತಾನು ಕೊರೆಯಿಸಿದ ಕೊಳವೆ ಬಾವಿಯಲ್ಲಿ ನೀರು ಬಾರದೆಯಿದ್ದಾಗ ಸಾಲದ ಸುಳಿಯಲ್ಲಿ ಸಿಲುಕಿ ಮನನೊಂದು ಅದೇ ಕೊಳವೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ನಡೆದ ಕೆಲ ಗಂಟೆಗಳಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಮೃತ ರೈತನ ಕುಟುಂಬಕ್ಕೆ ಸಾಂತ್ವನ ಹೇಳಿ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದರು.

ಮೃತ ರೈತನ ಕುಟುಂಬದ ಸ್ಥಿತಿ ಚಿಂತಾಜನಕವಾಗಿರುವುದನ್ನು ಕಣ್ಣಾರೆ ಕಂಡು 50 ಸಾವಿರ ರೂಪಾಯಿಯನ್ನು ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ ವೈಯಕ್ತಿವಾಗಿ ನೀಡಿದ್ದಾರೆ. ನಿಂಬರಗಿ ಅವರ ಪರವಾಗಿ ರಾಯಬಾಗ ವೃತ್ತ ನಿರೀಕ್ಷಕ (ಸಿ.ಪಿ.ಐ) ಕೆ.ಎಸ್.ಹಟ್ಟಿ ಬಂದು ಮೃತ ರೈತನ ಪತ್ನಿ ಕಸ್ತೂರಿ ಲಕ್ಕಪ್ಪ ದೊಡ್ಡಮನಿ, ಪುತ್ರ ಸಂಗಮೇಶ ದೊಡ್ಡಮನಿ ಹಾಗೂ ಪುತ್ರಿ ಜಯಶ್ರೀ ದೊಡ್ಡಮನಿ ಅವರಿಗೆ ನಗದು ಹಣ ನೀಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ‌ಭವನದಲ್ಲಿ ಆಯೋಜಿಸಲಾಗಿದೆ

Spread the loveಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ