ಚಿಕ್ಕೋಡಿ – ಮಾಜಿ ಸಚಿವ ಹಾಗೂ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಶಮನೆವಾಡಿಯಲ್ಲಿ 1800 ಕುಟುಂಬಗಳಿಗೆ ಆಹಾರ ಧಾನ್ಯ ವಿತರಿಸಿದರು.
ಮಹಾಮಾರಿ ಕೊರೋನಾ ಕಾಯಿಲೆ ತಡೆಗಟ್ಟುವ ಸಲುವಾಗಿ ದೇಶದಲ್ಲಿ ಲಾಕ್ಡೌನ್ ಇರುವುದರಿಂದ ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ಬಡ ಕುಟುಂಬಗಳಿಗೆ ಉಚಿತವಾಗಿ ಆಹಾರಧಾನ್ಯ ವಿತರಣೆ ಮಾಡಲಾಯಿತು.
ಜನರು ಆದಷ್ಟು ಮನೆಯಿಂದ ಹೊರಗೆ ಬಾರದೆ ಎಚ್ಚರದಿಂದಿರಬೇಕು. ಹೊರಗೆ ಬರಬೇಕಾದ ಅನಿವಾರ್ಯತೆ ಬಂದರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಗಣೇಶ ಹುಕ್ಕೇರಿ ಈ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರು, ಗ್ರಾಮ ಪಂಚಾಯತ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತಿದ್ದರು.
Laxmi News 24×7