ಚಿಕ್ಕೋಡಿ: ಏಳನೇ ತರಗತಿ ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕ ಅಸಭ್ಯವಾಗಿ ವರ್ತಿಸಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದ್ದು, ಶಿಕ್ಷಕನನ್ನು ಅಮಾನತು ಮಾಡಿ ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.
ಶಿಕ್ಷಕ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಲೈಂಗಿಕ ಕಿರುಕುಳ ನಿಡುತ್ತಿದ್ದ ಎಂದು ಶಾಲಾ ವಿದ್ಯಾರ್ಥಿನಿಯರು ಶಿಕ್ಷಣ ಇಲಾಖೆಗೆ ಲಿಖಿತ ದೂರು ಸಲ್ಲಿಸಿದ್ದರು. ದೂರು ಪರಿಶಿಲಿಸಿ, ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ 1966 ರ ನಿಯಮ 3 (1) ಉಲ್ಲಂಘನೆ ಅಡಿಯಲ್ಲಿ ಶಿಕ್ಷಕನ್ನು ಅಮಾನತು ಮಾಡಲಾಗಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ.
ಈ ಹಿಂದೆಯೂ ಶಿಕ್ಷಕನ ವಿರುದ್ಧ ಈ ರೀತಿಯ ಆರೋಪಗಳು ಕೇಳಿ ಬರುತ್ತಿದ್ದವು. ಆದರೆ ಯಾರೂ ಬಹಿರಂಗವಾಗಿ ಹೇಳಿರಲಿಲ್ಲ. ಇದೀಗ ವಿದ್ಯಾರ್ಥಿನಿಯರು ಶಿಕ್ಷಕನ ನಡವಳಿಕೆ ಬಗ್ಗೆ ಲಿಖಿತ ದೂರು ನೀಡಿ ಶಿಕ್ಷಕನ ಮುಖವಾಡ ಕಳಚಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು. ಆದರೆ ಈತ ಅವರ ಜೊತೆಗೇ ಅನುಚಿತವಾಗಿ ವರ್ತಿಸಿದ್ದಾನೆ. ಇಂತಹ ಶಿಕ್ಷಕರಿಂದಲೇ ಶಿಕ್ಷಕ ಸಮುದಾಯ ತಲೆ ತಗ್ಗಿಸುವ ಹಾಗಾಗಿದೆ. ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.