Breaking News

ಚಿಕ್ಕೋಡಿ -ಸದಲಗಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ಮಾಜಿ ಸಚಿವ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಪರಿಶೀಲನೆ

Spread the love

ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ಮಾಜಿ ಸಚಿವ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಲಾಕ್ ಡೌನ್ ನಿರ್ವಹಣೆ ಹಾಗೂ ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಚಿಕ್ಕಲವಾಳ, ರಾಮಪುರ, ಪಾಂಗೇರಿ ಮೊದಲಾದ ಗ್ರಾಮಗಳಿಗೆ ತೆರಳಿದ ಪ್ರಕಾಶ ಹುಕ್ಕೇರಿ ಅಲ್ಲಿನ ಪರಿಸ್ಥಿತಿಯ ಅವಲೋಕನ ನಡೆಸಿದರು.
ಈ ವೇಳೆ ಗ್ರಾಮಸ್ಥರ ಸಭೆ ನಡೆಸಿದ ಅವರು, ಮಹಾಮಾರಿ ಕೊರೋನಾ ತಡೆಗಟ್ಟಲು ಮನೆಯಲ್ಲಿಯೇ ಇರಬೇಕು. ಗ್ರಾಮದ ಸ್ವಚ್ಚತೆಗೆ ಆದ್ಯತೆ ನೀಡಬೇಕು. ಕೊರೋನಾ ಸೋಂಕಿನ ಬಗ್ಗೆ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಅನಗತ್ಯವಾಗಿ ಯಾರೂ ಹೊರಗಡೆ ಬರಬಾರದು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.
ಏನಾದರು ಸಮಸ್ಯೆಗಳಿದ್ದರೆ ಶಾಸಕ ಗಣೇಶ ಹುಕ್ಕೇರಿ ಅಥವಾ ನನಗೆ ತಿಳಿಸಿ ಎಂದು ಪ್ರಕಾಶ ಹುಕ್ಕೇರಿ ತಿಳಿಸಿದರು


Spread the love

About Laxminews 24x7

Check Also

ಮಂಡ್ಯ ಸಾಹಿತ್ಯ ಸಮ್ಮೇಳನ: ‘ದಕ್ಷಿಣ’ದ ಸಮ್ಮೇಳನಕ್ಕೆ ‘ಉತ್ತರ’ದವರ ಕೂಗು

Spread the love ಬೆಳಗಾವಿ: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಉತ್ತರ ಕರ್ನಾಟಕದವರನ್ನೇ ಸರ್ವಾಧ್ಯಕ್ಷರಾಗಿ ಆಯ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ