Breaking News
Home / ಜಿಲ್ಲೆ / ಚಿಕ್ಕ ಮಂಗಳೂರು / ಹೋಟೆಲ್‍ನ ಕ್ವಾರಂಟೈನ್ ಘಟಕ ಮಾಡುತ್ತಾರೆಂದು ವಿಷಯ ತಿಳಿದು ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್

ಹೋಟೆಲ್‍ನ ಕ್ವಾರಂಟೈನ್ ಘಟಕ ಮಾಡುತ್ತಾರೆಂದು ವಿಷಯ ತಿಳಿದು ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್

Spread the love

ಚಿಕ್ಕಮಗಳೂರು: ಹೋಟೆಲ್‍ನ ಕ್ವಾರಂಟೈನ್ ಘಟಕ ಮಾಡುತ್ತಾರೆಂದು ವಿಷಯ ತಿಳಿದು ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಹೋಗಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಕೋಟೆ ಬಡಾವಣೆಯಲ್ಲಿರೋ ವೈಟ್ ಫೆದರ್ ಹೋಟೆಲ್‍ನಲ್ಲಿ ವಿದೇಶ ಹಾಗೂ ಹೊರರಾಜ್ಯ ಬಂದ ಪ್ರಯಾಣಿಕರಿಗೆ ಕ್ವಾರಂಟೈನ್ ಘಟಕಕ್ಕೆ ಜಿಲ್ಲಾಡಳಿತ ಚಿಂತಿಸಿತ್ತು. ಈ ವಿಷಯ ತಿಳಿದ ಕೂಡಲೇ ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಇತ್ತ ಈ ಹೋಟೆಲ್‍ನಲ್ಲಿ ಕ್ವಾರಂಟೈನ್ ಘಟಕ ಮಾಡಲು ಸ್ಥಳೀಯರು ಕೂಡ ವಿರೋಧ ವ್ಯಕ್ತಪಡಿಸಿ ಇಲ್ಲ ಕ್ವಾರಂಟೈನ್ ಮಾಡೋದು ಬೇಡ ಎಂದಿದ್ದಾರೆ.

ನಗರದೊಳಗಿರುವ ಹೋಟೆಲ್‍ನಲ್ಲಿ ಕ್ವಾರಂಟೈನ್ ಮಾಡೋದು ಬೇಡ. ಇದು ಜನವಸತಿ ಪ್ರದೇಶ ಮಕ್ಕಳು, ವಯೋವೃದ್ಧರು ಓಡಾಡುತ್ತಾರೆ. ಆದ್ದರಿಂದ ಇಲ್ಲಿ ಕ್ವಾರಂಟೈನ್ ಮಾಡೋದು ಬೇಡ. ಕ್ವಾರಂಟೈನ್ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ನಗರದ ಹೊರಭಾಗದಲ್ಲೂ ಸಾಕಷ್ಟು ಹೋಟೆಲ್, ಹೋಂ ಸ್ಟೇ, ರೆಸಾರ್ಟ್‍ಗಳಿವೆ ಅಲ್ಲಿ ಕ್ವಾರಂಟೈನ್ ಮಾಡಿ. ನಗರದೊಳಗಿನ ಹೋಟೆಲ್‍ಗಳಲ್ಲಿ ಕ್ವಾರಂಟೈನ್ ಮಾಡಿದರೆ ಜನರಲ್ಲಿರುವ ಆತಂಕ ಹೆಚ್ಚಾಗುತ್ತದೆ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಅಲ್ಲದೇ ಹೋಟೆಲ್ ಮುಂಭಾಗದ ಮೆಟ್ಟಿಲುಗಳ ಮೇಲೆ ಕೂತು ಪ್ರತಿಭಟನೆ ಕೂಡ ನಡೆಸಿದ್ದಾರೆ.


Spread the love

About Laxminews 24x7

Check Also

ಸಾಮೂಹಿಕ ರಾಜೀನಾಮೆಗೆ ಮುಂದಾದ ಬಿಜೆಪಿ ಯುವ ಮೋರ್ಚಾ ಘಟಕ ಸದಸ್ಯರು

Spread the loveಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ಹತ್ಯೆಯಾಗಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಪಕ್ಷದ ವಿರುದ್ಧವೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ