Breaking News

10 ರೂ.ಗಾಗಿ ಪೆಟ್ರೋಲ್ ಬಂಕ್‌ನಲ್ಲಿ ಹೊಡೆದಾಟ – ಜಗಳ ಬಿಡಿಸಲು ಬಂದಿದ್ದವನ ಕೊಲೆ, 6 ಜನ ಅರೆಸ್ಟ್

Spread the love

ರಾಯಚೂರು: ತಾಲೂಕಿನ ಹಂಚಿನಾಳ ಕ್ಯಾಂಪ್ ಬಳಿ ಪೆಟ್ರೋಲ್ ಬಂಕ್‌ನಲ್ಲಿ  10 ರೂ.ಗೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಪ್ರಕರಣದ 6 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಹೊಡೆದಾಟದ ದೃಶ್ಯ ಪೆಟ್ರೋಲ್ ಬಂಕ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜಗಳ ಬಿಡಿಸಲು ಹೋದ ಗಿಲ್ಲೆಸುಗೂರು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೇಘನಾಥ್ (42) ಕೊಲೆಯಾದ ವ್ಯಕ್ತಿ. ಪೆಟ್ರೋಲ್ ಬಂಕ್ ಸಿಬ್ಬಂದಿ ರವಿ, ವೀರೇಶ್, ನರಸಿಂಹ, ಮಾರೆಪ್ಪ, ರಮೇಶ್, ಪ್ರವೀಣ ಬಂಧಿತ ಆರೋಪಿಗಳು ಎನ್ನಲಾಗಿದೆ. ಬಳಿಕ ಬಾಕಿ 10 ರೂ.ಗಾಗಿ ಬಂಕ್ ಸಿಬ್ಬಂದಿ ಜೊತೆ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಮೇಘನಾಥ್ ಸ್ಥಳಕ್ಕೆ ಬಂದು ಜಗಳ ಬಿಡಿಸಲು ಮುಂದಾಗಿದ್ದು, ಪೆಟ್ರೋಲ್ ಬಂಕ್ ಸಿಬ್ಬಂದಿ ದೊಣ್ಣೆಯಿಂದ ಹೊಡೆದಾಡಿಕೊಂಡಿದ್ದಾರೆ.

ಈ ಸಂಬಂಧ ಇಡಪನೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರು ಜನರನ್ನು ಬಂಧಿಸಿ, ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ


Spread the love

About Laxminews 24x7

Check Also

ಪತಿಗೆ ಬೇರೊಬ್ಬಳ ಜೊತೆ ಅನೈತಿಕ ಸಂಬಂಧ ಆರೋಪ – ಬೇಸತ್ತು ಆತ್ಮಹತ್ಯೆಗೆ ಶರಣಾದ ಪತ್ನಿ

Spread the loveಹಾವೇರಿ: ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಬೇಸತ್ತು ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ