Breaking News

ಗಣೇಶ ವಿಸರ್ಜನಾ ಮೆರವಣಿಗೆ ವೇಳೆ 2 ಗುಂಪಿನ ಯುವಕರ ನಡುವೆ ಮಾರಾಮಾರಿ

Spread the love

ವಿಜಯನಗರ: ಗಣೇಶ ವಿಸರ್ಜನಾ ಮೆರವಣಿಗೆ  ವೇಳೆ ಎರಡು ಗುಂಪಿನ ಯುವಕರ ನಡುವೆ ಮಾರಾಮಾರಿ ನಡೆದಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ  ನಗರದ ಕೌಲ್ ಪೇಟೆಯ ದೊಡ್ಡ ಮಸೀದಿ ಬಳಿ ನಡೆದಿದೆ.

5ನೇ ದಿನದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಘಟನೆ ನಡೆದಿದೆ. ಕಿಕ್ಕಿರಿದು ಸೇರಿದ್ದ ಜನರ ಮಧ್ಯೆ ಯುವಕರು ಹೊಡೆದಾಡಿಕೊಂಡಿದ್ದಾರೆ. ಒಬ್ಬ ಹುಡುಗನನ್ನ ಏಳೆಂಟು ಯುವಕರ ಗುಂಪೊಂದು ಅಟ್ಟಾಡಿಸಿ ಥಳಿಸಿದೆ.

ಪೊಲೀಸರು ಬರುತ್ತಿದ್ದಂತೆ ಯುವಕರು ಓಡಿ ಹೋಗಿದ್ದಾರೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಗಲಾಟೆ ಯಾಕಾಯ್ತು?. ಹೊಡೆದಾಡಿಕೊಂಡ ಯುವಕರು ಯಾರು?. ಯಾವ ಕಾರಣಕ್ಕೆ ಹೊಡೆದಾಡಿದ್ದಾರೆ ಅನ್ನೋದು ತಿಳಿದುಬಂದಿಲ್ಲ. ವಿಡಿಯೋ ಆಧಾರದ ಮೇಲೆ ಗಲಾಟೆ ಮಾಡಿಕೊಂಡ ಯುವಕರನ್ನ ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.


Spread the love

About Laxminews 24x7

Check Also

ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ: ಹೆಚ್‌ಡಿಕೆ

Spread the loveಬೆಂಗಳೂರು: ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ ಎಂದು ರಾಜ್ಯ ಸರ್ಕಾರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ