ಬೆಂಗಳೂರು: ಇಂದೋರ್ ಮಾದರಿಯನ್ನು ಗಮನದಲ್ಲಿಟ್ಟುಕೊಂಡು ಅದಕ್ಕಿಂತಲೂ ಉತ್ತಮ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವ ಮೂಲಕ ಬೆಂಗಳೂರಿನ ಸ್ವಚ್ಛತೆ ಕಾಪಾಡಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.
ಮಾದರಿ ಯೋಜನಡೆಯಡಿ ಪ್ರಾಯೋಗಿಕವಾಗಿ ಮತ್ತಿಕೆರೆ ವಾರ್ಡಿನಲ್ಲಿ ಸಮಗ್ರ ಘನತ್ಯಾಜ್ಯ ನಿರ್ವಹಣೆ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಡಾ. ಅಶ್ವತ್ಥನಾರಾಯಣ ಮಾತನಾಡಿದರು. ಸ್ವಚ್ಛತೆಯ ದೃಷ್ಟಿಯಿಂದ ಪ್ರಮುಖ ಕಾರ್ಯಕ್ರಮವಾದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಇದು ಸಾರ್ವಜನಿಕರು ಸೇರುವ ಕಾರ್ಯಕ್ರಮವಲ್ಲ ಎಂದು ಮೊದಲೇ ಸೂಚನೆ ನೀಡಲಾಗಿತ್ತು ಎಂದರು.
ಮುಖ್ಯವಾಗಿ ಸ್ವಚ್ಛತೆ ಗುಣಮಟ್ಟ ಹೆಚ್ಚಿಸುವುದು ನಮ್ಮ ಉದ್ದೇಶ. ಇದಕ್ಕೆ ಪೂರಕವಾಗಿ ಇಂದೋರ್ ನ ಕನ್ಸಲ್ಟೆಂಟ್ ಸಂಸ್ಥೆ ಪ್ರಾಯೋಗಿಕವಾಗಿ ತ್ಯಾಜ್ಯ ನಿರ್ವಹಣೆ ಕಾರ್ಯಕ್ಕೆ ಮುಂದಾಗಿದೆ. ಈ ಮಾದರಿಗೆ ತಾಂತ್ರಿಕ ಸ್ಪರ್ಶ ನೀಡಿ, ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಆರೋಗ್ಯ ಸಮಿತಿ ಅಧ್ಯಕ್ಷರು ಹಾಗೂ ಮಹಾಪೌರರು ನಿರ್ಧರಿಸಿದ್ದಾರೆ” ಎಂದು ಅವರು ತಿಳಿಸಿದರು.
“ಇಡೀ ಭಾರತದಲ್ಲಿ ಸ್ವಚ್ಛತಾ ಆಂದೋಲನ ನಡೆಯುತ್ತಿದ್ದು, ಸ್ವಚ್ಛತೆಗೆ ಬೆಂಗಳೂರು ಹೆಸರು ಮಾಡಿತ್ತು. ಈಗ ಕಸ ನಿರ್ವಹಣೆಯಲ್ಲಿ ಇಂದೋರ್ ನಂಬರ್ 1 ಸ್ಥಾನದ್ದಲ್ಲಿದ್ದು, ಎಲ್ಲರಿಗೂ ಮಾದರಿಯಾಗಿದೆ. ಅದೇ ಮಾದರಿಯನ್ನು ನಮ್ಮ ಭಾಗದಲ್ಲಿ ಅಳವಡಿಸಿಕೊಳ್ಳಲು ಮುಂದಾಗಿದ್ದೇವೆ. ಸ್ವಚ್ಛತೆ ನಿರ್ವಹಣೆಯಲ್ಲಿ ಕಸ ಸಂಗ್ರಹಣೆ ಒಂದು ಭಾಗವಾದರೆ, ಅದರ ವಿಂಗಡಣೆ ಅದಕ್ಕಿಂತಲೂ ಮುಖ್ಯವಾದ ಭಾಗ. ಹಸಿ, ಒಣ ಹಾಗೂ ಅಪಾಯಕಾರಿ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ, ವಿಲೇವಾರಿ ಮಾಡಲು ತಂತ್ರಜ್ಞಾನದ ನೆರವು ಪಡೆಯುವ ಚಿಂತನೆ ಇದೆ. ಈ ಮೂಲಕ ಬೆಂಗಳೂರು ಮಾದರಿ ಆಗಲಿದೆ. ಇದಕ್ಕೆ ನಾಗರಿಕರ ಸಹಕಾರ ಅತ್ಯಗತ್ಯ” ಎಂದು