Breaking News

202ನೇ ಕಿತ್ತೂರು ಉತ್ಸವದಲ್ಲಿ ಸಿಎಂ ಡಿಕೆಶಿ ಭಾಗಿ: ಬೆಳಗಾವಿಯ ಇಬ್ಬರು ಸಚಿವರು ಗೈರು!

Spread the love

ಬೆಳಗಾವಿ: ವೀರರಾಣಿ ಕಿತ್ತೂರು ಚೆನ್ನಮ್ಮನ ನಾಡಿನಲ್ಲಿ ನಡೆಯುತ್ತಿರುವ 202ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಿ, ಕಾರ್ಯಕ್ರಮದಲ್ಲಿ ಭಾಗಿಯಾದರು. ಇದೇ ವೇಳೆ ಬೆಳಗಾವಿ ಜಿಲ್ಲೆಯ ಇಬ್ಬರು ಸಚಿವರು ಸಮಾರಂಭಕ್ಕೆ ಗೈರಾಗಿರುವುದು ಗಮನ ಸೆಳೆಯಿತು.

ಕಿತ್ತೂರಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಆತ್ಮೀಯ ಸ್ವಾಗತ ಕೋರಿದರು. ಉತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಮುಖ್ಯಮಂತ್ರಿಗಳ ಆಗಮನಕ್ಕೆ ಕಾಯುತ್ತಿದ್ದರು. ಕಿತ್ತೂರಿಗೆ ಪ್ರವೇಶಿಸುತ್ತಿದ್ದಂತೆ ವಾಹನದಿಂದ ಇಳಿದ ಮುಖ್ಯಮಂತ್ರಿ, ನೆರೆದಿದ್ದ ಜನರತ್ತ ಕೈಬೀಸಿ ಅಭಿಮಾನಿಗಳ ಹರ್ಷೋದ್ಗಾರಕ್ಕೆ ಪ್ರತಿಕ್ರಿಯಿಸಿದರು.

ಬಳಿಕ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ರಾಣಿ ಕಿತ್ತೂರು ಚೆನ್ನಮ್ಮನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ಕೋಟೆ ಆವರಣದಲ್ಲಿರುವ ಚೆನ್ನಮ್ಮ ವೇದಿಕೆಯಲ್ಲಿ ನಡೆದ ಉತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಬಾಬಾಸಾಹೇಬ ಪಾಟೀಲ, ಚನ್ನರಾಜ ಹಟ್ಟಿಹೊಳಿ, ಮಹಾಂತೇಶ ಕೌಜಲಗಿ, ಅಶೋಕ ಪಟ್ಟಣ, ಆಸಿಫ್ (ರಾಜು) ಸೇಠ್ ಸೇರಿದಂತೆ ವಿವಿಧ ಮಠಾಧೀಶರು ಹಾಗೂ ಗಣ್ಯರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದರು.

ಇಬ್ಬರು ಸಚಿವರ ಗೈರು ಚರ್ಚೆಗೆ ಗ್ರಾಸ

202ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಹಕಾರ ಸಚಿವ ಲಕ್ಷ್ಮಣ ಸವದಿ ಗೈರಾಗಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆಯಿತು. ಜಿಲ್ಲೆಯ ಪ್ರಮುಖ ಐತಿಹಾಸಿಕ ಉತ್ಸವಕ್ಕೆ ಮುಖ್ಯಮಂತ್ರಿ ಆಗಮಿಸಿದ್ದರೂ, ಜಿಲ್ಲೆಯ ಇಬ್ಬರು ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರುವುದು ಚರ್ಚೆಗೆ ಕಾರಣವಾಯಿತು. ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮಾತ್ರ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂತ್ಯದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಆಗಮಿಸಿದರು.


Spread the love

About Laxminews 24x7

Check Also

ಶಿವಮೊಗ್ಗ ದಸರಾದಲ್ಲಿ ಅಂಬಾರಿ ಆನೆ ರಂಪಾಟ – ಅಧಿಕಾರಿಗಳಿಗೆ ಕ್ಲೀನ್‌ಚಿಟ್

Spread the loveಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ  ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ರಂಪಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕ್ಲೀನ್‌ಚಿಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ