ಮಂಡ್ಯ: ನಗರಕ್ಕೆ ಅಕ್ಟೋಬರ್ 31ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಭರ್ಜರಿ ಸಿದ್ಧತೆಗಳು ಆರಂಭಗೊಂಡಿವೆ.
ಕಾರ್ಯಕ್ರಮದ ಯಶಸ್ಸಿಗಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಗೌಡ ಗಣಿಗ ಅವರು ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ತಲೆ ಎತ್ತಲಿರುವ ಬೃಹತ್ ವೇದಿಕೆ ನಿರ್ಮಾಣ ಕಾಮಗಾರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಿದ್ಧತಾ ಕಾರ್ಯಗಳಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ.
ಮಂಡ್ಯ ನಗರದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿ, ಸಾರ್ವಜನಿಕ ಸೌಲಭ್ಯಗಳ ವಿಸ್ತರಣೆ ಮತ್ತು ಜನರ ದೀರ್ಘಕಾಲದ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದೆ. ಮುಖ್ಯಮಂತ್ರಿಗಳ ಕೈಯಿಂದ ನಡೆಯಲಿರುವ ಈ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಯು ಮಂಡ್ಯ ನಗರದ ಪ್ರಗತಿಗೆ ಹೊಸ ಚೈತನ್ಯ ನೀಡಲಿದೆ ಎಂದು ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ನಿರೀಕ್ಷಿಸಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಸಮನ್ವಯತೆಯಿಂದ ಅಚ್ಚುಕಟ್ಟಾಗಿ ಮಾಡಲಾಗುತ್ತಿದೆ.
Laxmi News 24×7