ಕರ್ನಾಟಕ-ಮಹಾರಾಷ್ಟ್ರ ವಿವಾದ ತಾರಕಕ್ಕೇರುತ್ತಿದ್ದಂತೆ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮ(MSRTC) ಕರ್ನಾಟಕಕ್ಕೆ ಬಸ್ ಸೇವೆಯನ್ನು ರದ್ದುಗೊಳಿಸಿದೆ. ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ವಿವಾದ ತಾರಕಕ್ಕೇರುತ್ತಿದ್ದಂತೆ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮ(MSRTC) ಕರ್ನಾಟಕಕ್ಕೆ ಬಸ್ ಸೇವೆಯನ್ನು ರದ್ದುಗೊಳಿಸಿದೆ.
ಪ್ರಯಾಣಿಕರು ಮತ್ತು ಬಸ್ಸಿನ ಸುರಕ್ಷತೆ ಮತ್ತು ಭದ್ರತೆಯನ್ನು ನೋಡಿಕೊಂಡು ಪೊಲೀಸರ ಜೊತೆ ಪರಿಶೀಲಿಸಿ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ಬೆಳಗಾವಿಯಲ್ಲಿ ಮತ್ತು ಗಡಿಭಾಗದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರವಾಗಿರುವುದರಿಂದ ಮಹಾರಾಷ್ಟ್ರದ ಬಸ್ಸುಗಳ ಮೇಲೆ ಕನ್ನಡಿಗರು, ಕನ್ನಡಪರ ಸಂಘಟನೆಗಳು ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಇಂದು ಈ ತೀರ್ಮಾನ ಕೈಗೊಂಡಿದೆ.