ಚಾಮರಾಜನಗರ: ನಾಳೆ ಕೊಳ್ಳೇಗಾಲಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಿದ್ದಾರೆ.
1,500 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಸಿಎಂ ನೆರವೇರಿಸಲಿದ್ದಾರೆ. ಕೊಳ್ಳೇಗಾಲದ ಎಂಜಿಎಸ್‌ವಿ ಕಾಲೇಜು ಮೈದಾನದಲ್ಲಿ ಸಮಾರಂಭ ಜರುಗಲಿದೆ. ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಹಲವು ಸಚಿವರು ಭಾಗಿಯಾಗಲಿದ್ದಾರೆ ಎಂದು ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾಹಿತಿ ನೀಡಿದ್ದಾರೆ.
ಕೊಳ್ಳೇಗಾಲದಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ಆಸ್ಪತ್ರೆ ಮೊದಲ ಹಂತದ ಕಾಮಗಾರಿ, ಅಗರ ಮಾಂಬಳ್ಳಿ ಕೆರೆಗಳಿಂದ ಬೆಂಗಳೂರು ದಾಬಸ್‌ಪೇಟೆ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಕೆ, ಮುಡಿಗುಂಡಂ ಸೇತುವೆ, ಯಳಂದೂರು ಸರ್ಕಾರಿ ಪದವಿ ಕಾಲೇಜು ಕಟ್ಟಡ, ಹೊಂಗನೂರು ಹಿರಿಕೆರೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಸಲಿದ್ದಾರೆ.
100 ಹಾಸಿಗೆಗಳ ಯಳಂದೂರು ಸರ್ಕಾರಿ ಆಸ್ಪತ್ರೆ, ಕೊಳ್ಳೇಗಾಲದ ಅಂಬೇಡ್ಕರ್ ಭವನ, ಮೆಟ್ರಿಕ್‌ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಸರ್ಕಾರಿ ಐಟಿಐ ಕಾಲೇಜು ಹೆಚ್ಚುವರಿ ಕೊಠಡಿಗಳು ಮತ್ತಿತರ ಕಾಮಗಾರಿಗಳ ಉದ್ಘಾಟಿಸಲಿದ್ದಾರೆ.
Laxmi News 24×7