ಬೆಂಗಳೂರು: ಹಾಲು – ಮೊಸರಿನ ದರ ಏರಿಕೆಗೆ ರಾಜ್ಯಾದ್ಯಂತ ಜಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್ (DK Shivakumar) ನಂದಿನಿ ಮೊಸರಿನ ದರ ಪ್ರತಿ ಲೀಟರ್ಗೆ 2 ರೂ. ಕಡಿಮೆ ಮಾಡಲು ಸೂಚನೆ ಕೊಟ್ಟಿದ್ದಾರೆ.
ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ಅರ್ಧ ಲೀಟರ್ ಮೊಸರಿನ ದರವನ್ನ 28 ರೂ. ನಿಂದ 34 ರೂ.ಗೆ ಹಾಗೂ 1 ಲೀಟರ್ ಮೊಸರಿನ ದರವನ್ನ 54 ರೂ. ನಿಂದ 68 ರೂ.ಗೆ ಹೆಚ್ಚಿಸಲಾಗಿತ್ತು. ಇದರ ವಿರುದ್ಧ ಜನರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಮೊಸರಿನ ದರ 2 ರೂ. ಕಡಿಮೆ ಮಾಡಲು ಸೂಚನೆ ಕೊಟ್ಟಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ ಅವರು, ಇವತ್ತು ಕೆಎಂಎಫ್ (KMF) ಹಾಗೂ ವಿವಿಧ ಜಿಲ್ಲಾ ಹಾಲು ಒಕ್ಕೂಟಗಳ ಪದಾಧಿಕಾರಿಗಳು ನನ್ನನ್ನು ಭೇಟಿಯಾಗಿ, ಹಾಲಿನ ದರ ಹೆಚ್ಚಳದ ನಿರ್ಧಾರಕ್ಕೆ ಧನ್ಯವಾದ ತಿಳಿಸಲು ಬಂದಿದ್ದರು. ಮೊಸರಿನ ಬೆಲೆಯನ್ನ 2 ರೂ. ಕಡಿಮೆ ಮಾಡಲು ಹೇಳುತ್ತೇನೆ. ಹಾಲಿನ ಬೆಲೆ ಪ್ಯಾಕ್ ಮೇಲೆ ನಿರ್ಧಾರ ಆಗುತ್ತೆ. ಈ ಬಗ್ಗೆ ಮಾಹಿತಿ ಅಧಿಕಾರಿಗಳು ಕೊಡ್ತಾರೆ ಎಂದು ತಿಳಿಸಿದ್ದಾರೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರತಿ ಲೀಟರ್ ಹಾಲಿಗೆ ರೈತರಿಗೆ ನೀಡುವ ಖರೀದಿ ದರದಲ್ಲಿ 7 ರೂ. ಹೆಚ್ಚಳ ಮಾಡಲಾಗಿದ್ದು, ಗ್ರಾಹಕರಿಗೆ ಅನ್ವಯಿಸುವ ಎಂಆರ್ಪಿ ದರದಲ್ಲಿಯೂ ಪ್ರತಿ ಲೀಟರ್ಗೆ 8 ರೂ. ಹೆಚ್ಚಳ ಮಾಡಲಾಗಿದೆ. ಇದರಿಂದ ರಾಜ್ಯದ ಸುಮಾರು 11 ಲಕ್ಷ ಹೈನುಗಾರ ರೈತ ಕುಟುಂಬಗಳಿಗೆ ಅನುಕೂಲವಾಗಲಿದ್ದು, ಅವರ ಆರ್ಥಿಕ ಸಬಲೀಕರಣಕ್ಕೆ ಮತ್ತಷ್ಟು ಬಲ ದೊರೆಯಲಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನೂ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಸದಸ್ಯರೊಂದಿಗೆ ಗೃಹಕಚೇರಿ ಕೃಷ್ಣಾದಲ್ಲಿ ನಡೆಸಿದ ಸಭೆಯ ಕುರಿತು ಮಾತನಾಡಿ, ಎಲ್ಲಾ ಚರ್ಚೆಯಾಗಿದೆ. 38 ಸಾವಿರ ಕೋಟಿ ರೂ. ಬಾಕಿ ಬರಬೇಕು ಅಂತಾ ಹೇಳಿದ್ದಾರೆ. ಕಳೆದ 6 ತಿಂಗಳಲ್ಲಿ ವಿಪರೀತ ಕೆಲಸ ಬಂದಿದೆ, ಕೆಲವು ಬೇಡಿಕೆಗಳನ್ನ ಒಪ್ಪಿಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಇನ್ನೂ ಬಸ್ ಟಿಕೆಟ್ ದರ ಏರಿಕೆ ವಿಚಾರವನ್ನ ನೀವೆ ತೀರ್ಮಾನ ಮಾಡಿ ಅಂತಾ ಹೇಳಿದ್ದೇನೆ ಎಂದರು.
Laxmi News 24×7