ಶಿವಮೊಗ್ಗ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮತ್ತೋರ್ವ ಶಾಸಕರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರಿಗೆ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದೆ. ರ್ಯಾಪಿಡ್ ಆಯಂಟಿಜೆನ್ ಟೆಸ್ಟ್ ನಲ್ಲಿ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.
ಇಂದು ಆರ್.ಪ್ರಸನ್ನ ಕುಮಾರ್ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡರು. ಈ ವೇಳೆ ಸೋಂಕು ಪತ್ತೆಯಾಗಿದೆ. ಆದರೆ ರೋಗ ಲಕ್ಷಣಗಳಿಲ್ಲದ ಕಾರಣ ಮನೆಯಲ್ಲೆ ಚಿಕಿತ್ಸೆ ವ್ಯವಸ್ಥೆ ಮಾಡಿಕೊಂಡಿದ್ದಾರೆ.
ತನ್ನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕ್ವಾರೈಂಟೈನ್ ಜೊತೆಗೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಶಾಸಕರ ಮನವಿ ಮಾಡಿದ್ದಾರೆ.