Breaking News

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ

Spread the love

ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್‌ಫಾಸ್ಟ್‌ನಲ್ಲಿ ನುಡಿದಿದ್ದಾರೆ.

ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಳುವುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ ಎಂದು ನುಡಿದಿದ್ದಾರೆ. ಈ ಹಿಂದೆ ನಡೆದ ಒಪ್ಪಂದ ಸೂತ್ರ ಬಿಚ್ಚಿಟ್ಟ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳ ಮುಂದೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು.

ಮುಂದಿನ‌‌‌ ಸಿಎಂ ಯಾರು ಎಂಬ ಹೆಸರನ್ನ ಹೇಳದ ಸಿದ್ದರಾಮಯ್ಯ, ಮುಂದೆ ಯಾರು ಆಗುತ್ತಾರ ಎನ್ನುವುದನ್ನು ಹೈಕಮಾಂಡ್ ಹೇಳಲಿದೆ. ಹೈಕಮಾಂಡ್ ನಾಯಕರು ನಾವು ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಅವರೇ ಎಲ್ಲ ಮುಂದಿನ ಪ್ರಕ್ರಿಯೆ ನಡೆಸುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯನವರು ಈ ರೀತಿ ಹೇಳುತ್ತಿದ್ದಂತೆ ಡಿಕೆ ಶಿವಕುಮಾರ್‌ ಕಣ್ಣಂಚಲಿ‌ ನೀರು ಬಂದಿದೆ. ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಕ್ಕೆ ಡಿಕೆಶಿ ಭಾವುಕರಾದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಬೆಳಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಉಪಹಾರ ಸಭೆಗೂ ಮೊದಲು ಡಿಕೆಶಿ ಜೊತೆ ಮೊದಲು ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದ್ದರು.


Spread the love

About Laxminews 24x7

Check Also

ಇಂದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Spread the loveಬೆಂಗಳೂರು: ಅಹಿಂದ ನಾಯಕ ಸಿದ್ದರಾಮಯ್ಯ ರಾಜಕೀಯ ಬದುಕಿನ ಮಹತ್ವದ ಅಧ್ಯಾಯಕ್ಕೆ ತೆರೆ ಬೀಳುತ್ತಿದೆ. ಕಾಂಗ್ರೆಸ್‌ನಲ್ಲಿ ಎರಡನೇ ಅವಧಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ