Breaking News

ಯುದ್ಧದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್.ಅಶೋಕ್

Spread the love

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ  ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾತಾನಾಡಿದ ಅವರು, ಸಿಎಂ ಸಿದ್ದರಾಮಯ್ಯ ಯುದ್ಧದ ಸಮಯದಲ್ಲಿ ರಾಜಕೀಯ ಮಾಡಬಾರದು. ಈ ಸಮಯದಲ್ಲಿ ರಾಜಕೀಯ ಬಿಟ್ಟು ಮಾತಾಡಬೇಕು. ಯುದ್ಧದಿಂದ ಸಮಸ್ಯೆ ಆಗಿದೆ. ಸಚಿವ ಮುನಿಯಪ್ಪ ಸರಿಯಾಗಿ ಮಾತನಾಡುತ್ತಾರೆ. ಅವರು ಕೇಂದ್ರದಲ್ಲಿ ಮಂತ್ರಿ ಆಗಿದ್ದವರು. ಅವರಿಗೆ ಎಲ್ಲವೂ ಗೊತ್ತಿದೆ. ಸಿದ್ದರಾಮಯ್ಯ ಬೇರೆ ಕಡೆ ಹೋಗಿಲ್ಲ, ಇಲ್ಲಿ ಮಾತ್ರ ಇದ್ದಾರೆ. ಅವರಿಗೆ ಅದಕ್ಕೆ ಗೊತ್ತಾಗುತ್ತಿಲ್ಲ ಎಂದು ಕಿಡಿಕಾರಿದರು.

ಸಿಎಂ ಗ್ಯಾಸ್ ಅಭಾವ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ರಾಜ್ಯ ಸರ್ಕಾರ ಕಾಳಸಂತೆಯಲ್ಲಿ ಮಾರಾಟ ಆಗುತ್ತಿರುವ ಗ್ಯಾಸ್ ತಡೆಯಬೇಕು. ಕೇಂದ್ರ ಸರ್ಕಾರ ಈಗಾಗಲೇ ಎಸ್ಮಾ ಜಾರಿ ಮಾಡಿದೆ. ಅಕ್ರಮ ಮಾರಾಟದ ವಿರುದ್ಧ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯ ಮಾಡಿದರು.

ಸಿದ್ದರಾಮಯ್ಯ ಈ ಸಮಯದಲ್ಲಿ ರಾಜಕೀಯ ಮಾಡೋದು ಬಿಡಲಿ. ರಾಜ್ಯದ ಜನರಿಗೂ ಮನವಿ ಮಾಡುತ್ತೇನೆ. ಯುದ್ಧದ ಸಮಯ ಇದು ಸಹಕಾರ ಕೊಡಬೇಕು. ಸಿದ್ದರಾಮಯ್ಯ ರಾಜಕೀಯ ಮಾಡೋದು ಬಿಟ್ಟು ಕಾಳಸಂತೆಯಲ್ಲಿ ಮಾರಾಟ ಆಗುತ್ತಿರುವ ಗ್ಯಾಸ್ ಮಾರಾಟ ನಿಲ್ಲಿಸಲಿ ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ

Spread the loveಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಈಗ ದೇಶದಲ್ಲಿ ಗ್ಯಾಸ್ ಎಮರ್ಜೆನ್ಸಿ  ಸೃಷ್ಟಿ ಮಾಡಿದೆ. ಈಗಾಗಲೇ ಗೃಹ ಬಳಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ