Breaking News

ಶಿವರಾತ್ರಿ ಹಬ್ಬದ ಬಳಿಕ ಬಜೆಟ್ ದಿನಾಂಕದ ಕುರಿತು ನಿರ್ಧಾರ: ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಬಳಿಕ ರಾಜ್ಯ ಬಜೆಟ್ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಬೆಳಗ್ಗೆ ನಗರದ ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳೊಂದಿಗೆ ಅವರು ಸಭೆ ನಡೆಸಿದರು. ಇದಕ್ಕೂ ಮುನ್ನ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹಬ್ಬದ ಬಳಿಕ ಬಜೆಟ್ ದಿನಾಂಕ ತಿಳಿಸಲಾಗುವುದು ಎಂದರು.

ಕೆಲ ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ವಂತ ಖರ್ಚಿನಲ್ಲಿ ಶಾಸಕರು ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗೆ ಅಸಮಾಧಾನಗೊಂಡ ಸಿದ್ದರಾಮಯ್ಯ ಅವರು ಪದೇ ಪದೆ ಇದೇ ವಿಷಯದ ಬಗ್ಗೆ ಕೇಳಬಾರದು. ಈ ವಿಚಾರದಲ್ಲಿ ಹಲವು ಬಾರಿ ಸ್ಪಷ್ಟನೆ ನೀಡಿದ್ದೇನೆ. ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಿದರೆ ಅದರಂತೆ ನಾನು ಮತ್ತು ಉಪಮುಖ್ಯಮಂತ್ರಿಗಳಿಬ್ಬರೂ ನಡೆದುಕೊಳ್ಳುತ್ತೇವೆ ಎಂದರು.


Spread the love

About Laxminews 24x7

Check Also

ನೈಟ್‌ ಔಟ್‌ ವೇಳೆ ಬೈಕ್‌ಗೆ ಲಾರಿ ಡಿಕ್ಕಿ – ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

Spread the loveನೆಲಮಂಗಲ: ಬಿರಿಯಾನಿ ತಿನ್ನಲು ಹೋಗ್ತಿದ್ದಾಗ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ನೆಲಮಂಗಲ-ಹಾಸನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ