Breaking News
Home / Uncategorized / ಸಿದ್ಧಗಂಗಾ ಶ್ರೀಮಠದ ದಾಸೋಹ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗಿ

ಸಿದ್ಧಗಂಗಾ ಶ್ರೀಮಠದ ದಾಸೋಹ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗಿ

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಲಿಂಗೈಕ್ಯ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಠದ ವಿದ್ಯಾರ್ಥಿಗಳಿಗೆ ದಾಸೋಹ ಬಡಿಸಿದರು.

ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಲಿಂಗೈಕ್ಯ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದರು. ಈ ವೇಳೆ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ದಾಸೋಹ ದಿನದ ಪ್ರಯುಕ್ತ ಶ್ರೀಮಠದ ವಿದ್ಯಾರ್ಥಿಗಳಿಗೆ ದಾಸೋಹ ಉಣಬಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ದಾಸೋಹ ಎಂದರೆ ಅನ್ನದ ಜೊತೆಜೊತೆಗೆ ಅಕ್ಷರ ದಾಸೋಹ ಕೂಡ ಮುಖ್ಯವಾಗುತ್ತದೆ. ಹಾಗಾಗಿ ಶ್ರೀಮಠದಲ್ಲಿ ಶಿವಕುಮಾರ ಸ್ವಾಮಿಯವರ ಲಿಂಗೈಕ್ಯ ದಿನದ ಅಂಗವಾಗಿ ದಾಸೋಹ ದಿನವನ್ನು ಆಚರಿಸಲಾಗುತ್ತಿದೆ. ಇದರ ಮಹತ್ವವನ್ನು ಈಡೀ ಸಮಾಕ್ಕೆ ತಿಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಇದರಲ್ಲಿ ನಮ್ಮನ್ನು ನಾವೇ ಇಡೀ ದಾಸೋಹ ಪರಂಪರೆಗೆ ಸಮರ್ಪಣೆ ಮಾಡಿಕೊಳ್ಳುವ ದಯೆ ಇದರಲ್ಲಿದೆ. ನಮ್ಮ ಸರಕಾರ ದಾಸೋಹದ ರೂಪದಲ್ಲಿ ಹಲವು ಕಾರ್ಯಕ್ರಮಗಳನ್ನು ಮಾಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಇನ್ನು 4ಕೆಜಿ ಇದ್ದ ಅಕ್ಕಿಯನ್ನು 5ಕೆಜಿಗೆ ಏರಿಸಿದೆ. ಸ್ಥಳೀಯ ಆಹಾರ ಪದ್ಧತಿಗಳಿಗೆ ಅನುಗುಣವಾಗಿ, ಜೋಳ, ರಾಗಿ ಮೊದಲಾದ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತಿದೆ. ಇದರೊಂದಿಗೆ ದಾಸೋಹ ಕಾರ್ಯವನ್ನು ಮಾಡುತ್ತಿರುವ ರಾಜ್ಯದ ಎಲ್ಲಾ ಮಠ ಮಾನ್ಯಗಳಿಗೆ ಪಡಿತರಗಳನ್ನು ನೀಡುವ ವ್ಯವಸ್ಥೆಯನ್ನು ನೀಡುವ ವ್ಯವಸ್ಥೆಯನ್ನು ನಮ್ಮ ಸರಕಾರ ಮಾಡುತ್ತದೆ. ಅಲ್ಲದೇ ಅಕ್ಷರ ದಾಸೋಹ ಮಾಡುವ ನಿಟ್ಟಿನಲ್ಲಿ ರೈತರ ಹಾಗೂ ಕಾರ್ಮಿಕರ ಮಕ್ಕಳಿಗೆ ಅಕ್ಷರ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಇನ್ನು ಬಡ ಜನರ ಅನುಕೂಲಕ್ಕಾಗಿ ನಮ್ಮ ಸರಕಾರ ಆಶ್ರಯ ದಾಸೋಹದಡಿ ಹಲವರಿಗೆ ನಿವೇಶನಗಳನ್ನು ನೀಡುವ ಗುರಿಯನ್ನು ಕೂಡ ಹಾಕಿಕೊಂಡಿದೆ ಎಂದರು.


Spread the love

About Laxminews 24x7

Check Also

ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Spread the loveಶಿವಮೊಗ್ಗ: ಈಶ್ವರಪ್ಪ ಮೋದಿ ಫೋಟೋವನ್ನು ಬಳಕೆ ಮಾಡುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಬಿಜೆಪಿಯವರು ಕೋರ್ಟ್‌ ಹಾಗೂ ಚುನಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ