Breaking News

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್‌

Spread the love

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಭೇಟಿ ನೀಡಿದ್ದಾರೆ.

ವಿಜಯ್‌ ಅವರಿಗೆ ಹೂಗುಚ್ಛ ನೀಡಿ ಆಡಳಿತ ಮಂಡಳಿಯ ಟ್ರಸ್ಟಿಗಳು ಸ್ವಾಗತ ಕೋರಿದರು. ಮಂತ್ರಘೋಷದೊಂದಿಗೆ ಕ್ಷೇತ್ರದೊಳಗೆ ಅರ್ಚಕ ವೃಂದ ಬರಮಾಡಿಕೊಂಡಿತು.

ಶಲ್ಯ ಧರಿಸಿ ಆಗಮಿಸುವ ಮೂಲಕ ಸಿಎಂ ವಿಜಯ್‌ ದೇವಸ್ಥಾನದ ಶಿಷ್ಟಾಚಾರ ಪಾಲನೆ ಮಾಡಿದರು. ಪ್ರಧಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಸಂಕಲ್ಪ ಪೂಜೆ ನೆರವೇರಿಸಲಾಯಿತು. ಸಿಎಂ ವಿಜಯ್‌ ಸಂಕಲ್ಪ ಪೂಜೆ ಮಾಡಿದರು.

ಶಕ್ತಿ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್‌ ಪ್ರಾರ್ಥನೆ ಸಲ್ಲಿಸಿದರು. ಸಂಕಲ್ಪ ಪೂಜೆ ಬಳಿಕ ದೀಪಾರಾಧನೆ ಮಾಡಲಾಯಿತು. ಈ ವೇಳೆ ಸಿಎಂಗೆ ಅರ್ಚಕರು ರಕ್ಷಾ ದಾರ ಕಟ್ಟಿದರು. ಪೂಜೆ ಬಳಿಕ ವಿಜಯ್‌ ದೇವಸ್ಥಾನದಿಂದ ಹೊರಟರು.

ನೆಚ್ಚಿನ ನಟ, ಸಿಎಂ ನೋಡಲು ಅಭಿಮಾನಿಗಳು ಮುಗಿಬಿದ್ದರು. ಅವರನ್ನು ನಿಯಂತ್ರಿಸಲು ಪೊಲೀಸರು, ಭದ್ರತಾ ಸಿಬ್ಬಂದಿ ಹರಸಾಹಸ ಪಟ್ಟರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ