Breaking News

ನಾಲ್ವಾರ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಸಿಎಂ ಭೇಟಿ – ಸಿದ್ದರಾಮಯ್ಯಗೆ ಚಿನ್ನದ ಉಂಗುರ ತೊಡಿಸಿ ಸತ್ಕಾರ

Spread the love

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಸುಕ್ಷೇತ್ರ ನಾಲ್ವಾರ ಗ್ರಾಮದ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ  ಭೇಟಿ ನೀಡಿ, ಡಾ. ಸಿದ್ದ ತೋಟೇಂದ್ರ ಶಿವಾಚಾರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ದಾಖಲೆ ಮಟ್ಟದಲ್ಲಿ ಅತಿ ಹೆಚ್ಚು ಬಾರಿ ರಾಜ್ಯ ಬಜೆಟ್ ಮಂಡನೆ ಮಾಡಿದ ಸಾಧನೆಗಾಗಿ, ಮಠದ ವತಿಯಿಂದ ಮುಖ್ಯಮಂತ್ರಿಗಳಿಗೆ ವಿಶೇಷ ಗೌರವ ಸಮರ್ಪಿಸಲಾಯಿತು. ಶ್ರೀ ಕೋರಿಸಿದ್ದೇಶ್ವರ ಮಠದ ಶ್ರೀಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಚಿನ್ನದ ಉಂಗುರ ತೊಡಿಸಿ, ಶಾಲು ಹೊದಿಸಿ ಆತ್ಮೀಯವಾಗಿ ಸತ್ಕರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಪ್ರಮುಖ ನಾಯಕರು ಮತ್ತು ಜನಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು. ಮಠಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಕೆಲಕಾಲ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡು, ಮಠದ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಎಲ್‌ಪಿಜಿ ಸಿಲಿಂಡರ್‌ಗೆ ರಾತ್ರಿಯಿಡೀ ಕ್ಯೂ ಕೂತ ಜನ

Spread the loveಬೆಂಗಳೂರು: ಮಧ್ಯಪ್ರಾಚ್ಯ ಯುದ್ಧದಿಂದ ಜಗತ್ತಿನಲ್ಲಿ ʻಎನರ್ಜಿ ಎಮರ್ಜೆನ್ಸಿʼ  ಸೃಷ್ಟಿ ಆಗಿಬಿಡುತ್ತಾ ಅನ್ನೋ ಕಳವಳ ಹೆಚ್ಚಾಗ್ತಿದೆ. ಕೊರೊನಾ ಬಳಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ