Breaking News

ದ್ವಿಚಕ್ರ ವಾಹನ ಸವಾರರಿಗೆ ಸಿಎಂ ಯಡಿಯೂರಪ್ಪ ಗುಡ್‍ನ್ಯೂಸ್

Spread the love

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಿಎಂ ಯಡಿಯೂರಪ್ಪ ಗುಡ್‍ನ್ಯೂಸ್ ನೀಡಿದ್ದು, ಏಪ್ರಿಲ್ 20ರ ನಂತರ ಯಾವುದೇ ಪಾಸ್ ಇಲ್ಲದೆ ಬೈಕ್‍ಗಳು ಓಡಾಡಬಹುದು ಎಂದು ಘೋಷಣೆ ಮಾಡಿದರು
.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಏಪ್ರಿಲ್ 20ರ ನಂತರ ದ್ವಿಚಕ್ರ ವಾಹಾನ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಅದಕ್ಕೆ ಯಾವುದೇ ಪಾಸ್ ಅನುಮತಿ ಬೇಕಾಗಿಲ್ಲ. ಹೊರ ಜಿಲ್ಲೆಗಳಿಗೆ ಹೋಗುವಂತಿಲ್ಲ, ಅದೇ ಜಿಲ್ಲೆಯ ಒಳಗೆ ಓಡಾಡಬೇಕು. ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಇತರ ವಲಯಗಳಲ್ಲಿ ದ್ವಿಚಕ್ರ ವಾಹನಗಳು, ಇಲ್ಲಿಯವರೆಗೆ ಪಾಸ್ ಪಡೆದಿರುವ ಕಾರುಗಳು ಹಾಗೂ ಸರಕು ಸಾಗಣೆ ವಾಹನಗಳ ಓಡಾಟಕ್ಕೆ ಅನುಮತಿ ನೀಡಲಾಗುವುದು ಎಂದು ತಿಳಿಸಿದರು.ಇಲ್ಲಿಯವರೆಗೆ ಪಾಸ್ ಕೊಟ್ಟಿರೋದು ಮೇ 3ರ ವರೆಗೆ ಅನುಮತಿ ಮುಂದೂಡಲಾಗಿದೆ. ಯಾವುದೇ ಕಾರಣಕ್ಕೂ ಹೊಸ ಪಾಸ ವಿತರಣೆ ಇಲ್ಲ. ಅಂತರ್ ಜಿಲ್ಲಾ ಓಡಾಟವಿಲ್ಲ, ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳಬೇಕು. ಅಲ್ಲದೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಏಪ್ರಿಲ್ 20ರಿಂದ ಐಟಿ-ಬಿಟಿ ಕಂಪನಿಗಳು ಓಪನ್ ಆಗುತ್ತದೆ. ಆದರೆ ಶೇ.33ರಷ್ಟು ಉದ್ಯೋಗಿಗಳು ಮಾತ್ರ ಇರುತ್ತಾರೆ.ಪಬ್, ಬಾರ್, ಹೋಟೆಲ್, ಮಾಲ್ ಯಾವುದೂ ಇರಲ್ಲ. ವಾಣಿಜ್ಯ ಉದ್ದೇಶದ ಶಾಪ್ ಓಪನ್ ಇರಲ್ಲ. ಅಲ್ಲದೇ ಬಸ್‍ಗಳ ಸಂಚಾರ ಇರಲ್ಲ. ಆದರೆ ಕಂಪನಿಗಳ ಬಸ್‍ಗಳು ಓಡಾಟ ಮಾಡಬಹುದು. ಲಾಕ್‍ಡೌನ್ ಮುಗಿಯುವ ಮೇ 3ರ ತನಕ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಹೀಗಾಗಿ ಮೇ 3ರ ನಂತರ ಮದ್ಯ ಮಾರಾಟಕ್ಕೆ ತೀರ್ಮಾನ ಮಾಡುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.


Spread the love

About Laxminews 24x7

Check Also

ಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಚೆನ್ನಮ್ಮ, ರಾಯಣ್ಣಿಗೆ ಗೌರವ

Spread the loveಬೆಂಗಳೂರು, (ಜುಲೈ 15): ಸ್ವಾತಂತ್ರ್ಯೋತ್ಸವ (Independence Day) ಮತ್ತು ಗಣರಾಜ್ಯೋತ್ಸವ ಅಂಗವಾಗಿ ಪ್ರತಿ ವರ್ಷ ಒಂದೊಂದು ರೀತಿಯ ವಿಷಯವಸ್ತುವಿನ ಆಧಾರದಲ್ಲಿ ತೋಟಗಾರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ