Breaking News
Home / ಜಿಲ್ಲೆ / ಧಾನಸಭಾ ಅಧಿವೇಶನದ ನಡುವೆಯೂ ಸಿಎಂ ಬಿಎಸ್ ಯಡಿಯೂರಪ್ಪ ನೋಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಜಾತ್ರಾಮಹೋತ್ಸವದಲ್ಲಿ ಪಾಲ್ಗೊಂಡರು.

ಧಾನಸಭಾ ಅಧಿವೇಶನದ ನಡುವೆಯೂ ಸಿಎಂ ಬಿಎಸ್ ಯಡಿಯೂರಪ್ಪ ನೋಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಜಾತ್ರಾಮಹೋತ್ಸವದಲ್ಲಿ ಪಾಲ್ಗೊಂಡರು.

Spread the love

ತುಮಕೂರು: ವಿಧಾನಸಭಾ ಅಧಿವೇಶನದ ನಡುವೆಯೂ ಸಿಎಂ ಬಿಎಸ್ ಯಡಿಯೂರಪ್ಪ ಅವರು ತಿಪಟೂರು ತಾಲೂಕಿನ ನೋಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಜಾತ್ರಾಮಹೋತ್ಸವದಲ್ಲಿ ಪಾಲ್ಗೊಂಡರು.

ಹೆಲಿಕಾಪ್ಟರ್ ಮೂಲಕ ಬೆಳಗ್ಗೆ 9:30ಕ್ಕೆ ಮಠಕ್ಕೆ ಆಗಮಿಸಿದ ಸಿಎಂ, ಮೃತ್ಯುಂಜಯ ಹೋಮ, ರುದ್ರ ಹೋಮ, ಜಯಾದಿ ಹೋಮದಲ್ಲಿ ಭಾಗಿಯಾಗಿ ಪೂಜೆ ಸಲ್ಲಿಸಿದರು. ಬಳಿಕ ಕಾಡುಸಿದ್ದೇಶ್ವರ ಮಠದ ಕರಿವೃಷಭ ಶಿವಯೋಗೇಶ್ವರ ಶ್ರೀಗಳ ಆಶೀರ್ವಾದ ಪಡೆದರು.

ವೇದಿಕೆ ಕಾರ್ಯಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಕಾಡುಸಿದ್ದೇಶ್ವರ ಮಠದ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಸೇವೆಯ ಗುಣಗಾನ ಮಾಡಿದರು. ಅಲ್ಲದೆ ರಾಜ್ಯ ಸರ್ಕಾರದ ವತಿಯಿಂದ ಮಠದ ಅಭಿವೃದ್ಧಿಗೆ ಸಹಾಯ ಮಾಡಲಾಗುವುದು ಎಂದು ಭರವಸೆ ನಿಡಿದರು. ಅಧಿವೇಶನಕ್ಕೆ ವಿಳಂಬವಾಗುವ ಹಿನ್ನೆಲೆಯಲ್ಲಿ ಚುಟುಕಾಗಿ ಭಾಷಣ ಮುಗಿಸಿ ಜಾತ್ರೆಯಿಂದ ಸಿಎಂ ವಿಧಾನಸೌಧ ದತ್ತ ಪಯಣ ಬೆಳೆಸಿದರು.


Spread the love

About Laxminews 24x7

Check Also

ಸಾರ್ವಜನಿಕ ಆಸ್ತಿ ಮಾರಿದ್ದೇ ಮೋದಿ ಸಾಧನೆ: ಖರ್ಗೆ ಟೀಕೆ

Spread the love ನವದೆಹಲಿ: ‘ದೇಶದಲ್ಲಿನ ಸಾರ್ವಜನಿಕ ಆಸ್ತಿಗಳನ್ನು ತನ್ನ ಬಂಡವಾಳಶಾಹಿ ಸ್ನೇಹಿತರಿಗೆ ಅತಿ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದೇ ಪ್ರಧಾನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ