ಬೆಂಗಳೂರು – ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಇತ್ತೀಚೆಗೆ ಸಂಭವಿಸಿದ ಒಂದು ಘಟನೆಯ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿ ರವಿ ಚನ್ನಣ್ಣನವರ್ ಅವರ ವಿರುದ್ಧ ನಾನು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದೇನೆ ಎಂಬುದಾಗಿ ಕೆಲವು ಸೋಶಿಯಲ್ ಮೀಡಿಯಾಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.
ರವಿಚನ್ನಣ್ಣವರ್ ಅವರೊಬ್ಬ ಒಳ್ಳೆಯ ಅಧಿಕಾರಿ ಎಂಬುದನ್ನು ನಾನು ಬಲ್ಲೆ. ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆಯೇ ವಿನ: ಅವರು ಸಾರಿಗೆ ಇಲಾಖೆಯಲ್ಲಿ ಹಸ್ತಕ್ಷೇಪ ನಡೆಸಿದ್ದು ನನ್ನ ಗಮನಕ್ಕೆನೂ ಬಂದಿಲ್ಲ ಮತ್ತು ಈ ಬಗ್ಗೆ ಯಾವುದೇ ಸಂಘಟನೆಗಳು ನನ್ನಲ್ಲಿ ಆಕ್ಷೇಪ ವ್ಯಕ್ತಪಡಿಸಿಲ್ಲ.
ಹೀಗಿರುವಾಗ ವಿನಾಕಾರಣ ಅಧಿಕಾರಿಗಳ ವಿರುದ್ಧ ನಾನು ಮುಖ್ಯಮಂತ್ರಿಗಳಿಗೆ ದೂರು ನೀಡುವಂಥ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.