ಶಿವಮೊಗ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಆಂಗ್ಲೋ-ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ನೀಡಲಿದೆ.
ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಂದ ಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ www.kmdc.kar.nic.in/arivu2 ನಲ್ಲಿ ಅರ್ಜಿ ಸಲ್ಲಿಸಿ, ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್‍ನೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆಪ್ಟಂಬರ್ 18 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಜಪ್ಪ ಆಸ್ಪತ್ರೆ ಎದುರು ರಸ್ತೆ, ಅಚ್ಯುತ್‍ರಾವ್ ಲೇಔಟ್ 4ನೇ ತಿರುವು ಶಿವಮೊಗ್ಗ ಇಲ್ಲಿ ಸಲ್ಲಿಸುವಂತೆ ಜಿಲ್ಲಾ ವ್ಯವಸ್ಥಾಪಕರು ತಿಳಿಸಿರುತ್ತಾರೆ.
ಮಾಹಿತಿಗಾಗಿ ನಿಗಮದ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-228262 ನ್ನು ಸಂಪರ್ಕಿಸುವುದು.
Laxmi News 24×7