Breaking News
Home / ಜಿಲ್ಲೆ / ಪ್ರಧಾನಿ ಸೂಚನೆಯಂತೆ ನಾಳೆಯಿಂದ ರಾಜ್ಯದಲ್ಲಿ ಟೈಟ್ ಲಾಕ್‍ಡೌನ್ : ಸಿಎಂ ಬಿಎಸ್ವೈ

ಪ್ರಧಾನಿ ಸೂಚನೆಯಂತೆ ನಾಳೆಯಿಂದ ರಾಜ್ಯದಲ್ಲಿ ಟೈಟ್ ಲಾಕ್‍ಡೌನ್ : ಸಿಎಂ ಬಿಎಸ್ವೈ

Spread the love

ಬೆಂಗಳೂರು, ಏ.14- ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇ 3 ರ ವರೆಗೆ ಲಾಕ್ ಡೌನನ್ನು ವಿಸ್ತರಿಸಿರುವುದನ್ನು ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಪ್ರಧಾನ ಮಂತ್ರಿಯವರು ದೇಶದ ಜನತೆಗೆ ನೀಡಿದ ಸಂದೇಶದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಭಾರತ ಸರ್ಕಾರ ನಾಳೆ ಹೊರಡಿಸಲಿರುವ ಮಾರ್ಗಸೂಚಿಗಳ ಅನುಸಾರ ನಮ್ಮ ಸರ್ಕಾರ ಲಾಕ್ ಡೌನನ್ನು ಸಮರ್ಪಕವಾಗಿ ಪಾಲನೆ ಮಾಡಲಿದೆ ಎಂದರು.

ಏಪ್ರಿಲ್ 20ರ ವರೆಗೆ ಪ್ರಧಾನಿಯವರು ತಿಳಿಸಿದಂತೆ ಇನ್ನಷ್ಟು ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲಿಸಲಾಗುವುದು. ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುವುದು. ನಾಡಿನ ಜನತೆ ಸ್ವಯಂ ಪ್ರೇರಿತರಾಗಿ ಈ ಕ್ರಮಗಳಿಗೆ ಸಹಕರಿಸಬೇಕೆಂದು ಮನವಿ ಮಾಡುತ್ತೇನೆ.

ಪ್ರಧಾನಿಯವರು ಹೇಳಿದಂತೆ ದೇಶದಲ್ಲಿ ಹಾಗೂ ನಮ್ಮ ರಾಜ್ಯದಲ್ಲಿಯೂ ಆರೋಗ್ಯ ಸೌಲಭ್ಯಗಳನ್ನು ಕಳೆದ ಎರಡು ತಿಂಗಳಲ್ಲಿ ಹೆಚ್ಚಿಸಲಾಗಿದೆ ಎಂದು ಹೇಳಿದರು. ಪ್ರಧಾನ ಮಂತ್ರಿಯವರು ನೀಡಿದ ಏಳು ಸಲಹೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಕರ್ನಾಟಕದ ಜನತೆಗೆ ನಾನು ಮನವಿ ಮಾಡುತ್ತೇನೆ.

ಮನೆಯ ಹಿರಿಯರ ವಿಶೇಷ ಕಾಳಜಿ ವಹಿಸಿ. ಯಾವುದೇ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿರುವವರನ್ನು ಹೆಚ್ಚು ಜೋಪಾನ ಮಾಡಿ ಎಂದರು. ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಮನೆಯಲ್ಲಿ ಮಾಡಿದ ಮಾಸ್ಕ್ ಬಳಸಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆಯ ಸಲಹೆಗಳನ್ನು ಪಾಲಿಸಿ. ಬಿಸಿನೀರು, ಕಷಾಯ ಕುಡಿಯಿರಿ. ಆರೋಗ್ಯ ಸೇತು ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ. ಬಡ ಕುಟುಂಬಗಳಿಗೆ ನೆರವಾಗಿ. ನಿಮ್ಮ ಕೃಷಿ, ಉದ್ಯೋಗದಲ್ಲಿ ಸಹೋದ್ಯೋಗಿಗಳಿಗೆ, ನೌಕರರಿಗೆ ನೆರವಾಗಿ. ನೌಕರಿಯಿಂದ ತೆಗೆಯಬೇಡಿ, ಪೊಲೀಸ್, ಆರೋಗ್ಯ ಕಾರ್ಯಕರ್ತರು, ಪೌರ ಕಾರ್ಮಿಕರನ್ನು ಗೌರವಿಸಿ ಎಂದು ಸಲಹೆ ಮಾಡಿದರು.

ದೇಶದಲ್ಲಾಗಲಿ, ರಾಜ್ಯದಲ್ಲಾಗಲಿ, ಅಗತ್ಯ ವಸ್ತುಗಳ ಹಾಗೂ ಔಷಧಿ ಪೂರೈಕೆಗೆ ಯಾವುದೇ ತೊಂದರೆ ಇಲ್ಲ. ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಕ್ರಮ ವಹಿಸಲಾಗುವುದು. ವಿಶೇಷವಾಗಿ ವಲಸೆ ಕಾರ್ಮಿಕರು ಎಲ್ಲಿದ್ದೀರೋ ಅಲ್ಲಿಯೇ ಇರಿ, ಸುರಕ್ಷಿತವಾಗಿರಿ ಎಂದು ಮನವಿ ಮಾಡುತ್ತೇನೆ. ಮೇ 3 ವರೆಗೆ ಲಾಕ್ ಡೌನ್ ನಿಯಮ ಪಾಲಿಸಿ. ಎಲ್ಲಿದ್ದೀರೋ ಅಲ್ಲೇ ಸುರಕ್ಷಿತವಾಗಿರಿ ಎಂದರು.


Spread the love

About Laxminews 24x7

Check Also

ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ವರ್ಷದ ಮೊದಲ ಮಳೆ

Spread the love ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಮತ್ತು ಮಧ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ