ಕಾಂಪೌಂಡ್‍ಗೆ ಕಾರು ಡಿಕ್ಕಿಯಾಗಿ ಚಾಲಕ ಸಾವು – ನಜ್ಜುಗುಜ್ಜಾದ ಕಾರ್……..

Spread the love

ಚಿಕ್ಕಬಳ್ಳಾಪುರ: ಕಾಂಪೌಂಡ್‍ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ನಡೆದಿದೆ.

ಸೋಮವಾರ ರಾತ್ರಿ ಗೌರಿಬಿದನೂರು ತಾಲೂಕಿನ ಇಡಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ 32 ವರ್ಷದ ವಿನೋದ್ ಮೃತ ವ್ಯಕ್ತಿ. ಮೃತ ವಿನೋದ್ ಬೆಂಗಳೂರಿನಲ್ಲಿ ಪೈಂಟ್ಸ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡುತ್ತಿದ್ದನು. ಆದರೆ ಕೊರೊನಾ ಲಾಕ್‍ಡೌನ್‍ನಿಂದ ವಿನೋದ್ ಬೆಂಗಳೂರಿನಿಂದ ವಾಪಸ್ ಬಂದು ತನ್ನ ಸ್ವಗ್ರಾಮದಲ್ಲಿದ್ದನು.

ಸೋಮವಾರ ರಾತ್ರಿ ಗ್ರಾಮದಲ್ಲೇ ಕಾಂಪೌಂಡ್‍ಗೆ ಕಾರು ಡಿಕ್ಕಿಯಾಗಿ ವಿನೋದ್ ಮೃತಪಟ್ಟಿದ್ದಾನೆ. ಮದ್ಯ ಸೇವಿಸಿ ವಿನೋದ್ ಕಾರು ಚಲಾಯಿಸಿದ್ದ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ

Spread the loveಚಿಕ್ಕಬಳ್ಳಾಪುರ: ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ (MGNREGA) ಮರುಸ್ಥಾಪಿಸುವವರೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ