Breaking News

ಡಿಜಿಪಿ ರಾಮಚಂದ್ರರಾವ್ ಅಮಾನತು ವಾಪಸ್ ಸಿಎಂ ನಿರ್ಧಾರ: ಪರಮೇಶ್ವರ್

Spread the love

ಬೆಂಗಳೂರು: ಡಿಜಿಪಿ ರಾಮಚಂದ್ರರಾವ್ ಅಮಾನತು ವಾಪಸ್ ನಿರ್ಧಾರ ಸಿಎಂ ಸಿದ್ದರಾಮಯ್ಯನವರದ್ದು  ಎಂದು ಗೃಹ ಸಚಿವ ಪರಮೇಶ್ವರ್  ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮಚಂದ್ರರಾವ್ ಅವರ ಅಮಾನತನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ವಾಪಸ್ ಪಡೆದಿದೆ. ರಾಮಚಂದ್ರರಾವ್ ಈ ತಿಂಗಳ ಕೊನೆಗೆ ನಿವೃತ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಅವರ ಅನುಮತಿ ಪಡೆದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಮಾನತು ವಾಪಸ್ ಪಡೆದಿದ್ದು ಸರಿ ತಪ್ಪು ಎಂದು ನಾನು ಹೇಳಲು ಬರುವುದಿಲ್ಲ. ಅದು‌ ಡಿಪಿಆರ್ ಮತ್ತು ಮುಖ್ಯಮಂತ್ರಿಗಳಿಗೆ ಬರುತ್ತದೆ. ಅವರು ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದರು.

ಸಿಎಂ ಬಳಿ ರಾಮಚಂದ್ರರಾವ್ ವಿವರಣೆ ನೀಡಿರುವುದು ನನಗೆ ಗೊತ್ತಿತ್ತು. ನಾನು ನಿವೃತ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ಅಮಾನತು ನಿರ್ಧಾರ ಪರಿಶೀಲಿಸಿ ಎಂದು ಮನವಿ ಮಾಡಿದ್ದರು. ಮನವಿಯಲ್ಲಿ ತನಿಖೆಯನ್ನು ಮುಂದುವರಿಸಿ ಎಂದು ಕೇಳಿಕೊಂಡಿದ್ದರು. ಕೇಸ್ ಅಂತಿಮ ಆಗುವವರೆಗೂ ತನಿಖೆ ನಡೆಯುತ್ತದೆ. ತನಿಖೆಯಲ್ಲಿ ಬಂದ ವರದಿ ಮೇಲೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅನೇಕ ಸಮಯದಲ್ಲಿ ನಿವೃತ್ತಿ ಆದ ಮೇಲೂ ಪೆನ್ಶನ್ ಹಿಡಿದಿರೋದು ನೋಡಿದ್ದೇವೆ ಎಂದು ವಿವರಿಸಿದರು.

Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ