Breaking News
Home / ಜಿಲ್ಲೆ / ಉತ್ತರಾಧಿಕಾರ ವಿವಾದ – ಸಿಎಂ ಮಧ್ಯಸ್ಥಿಕೆಗೆ ದಿಂಗಾಲೇಶ್ವರ ಬೆಂಬಲಿಗರ ಒತ್ತಾಯ

ಉತ್ತರಾಧಿಕಾರ ವಿವಾದ – ಸಿಎಂ ಮಧ್ಯಸ್ಥಿಕೆಗೆ ದಿಂಗಾಲೇಶ್ವರ ಬೆಂಬಲಿಗರ ಒತ್ತಾಯ

Spread the love

ಹುಬ್ಬಳ್ಳಿ: ಉತ್ತರ ಕರ್ನಾಟಕದ ಹೆಮ್ಮೆಯ ಮಠದಲ್ಲಿ ಒಂದಾಗಿರುವ ಮೂರು ಸಾವಿರ ಮಠದ ಉತ್ತರಾಧಿಕಾರ ವಿವಾದ ಮುಗಿಯದ ಅಧ್ಯಾಯದಂತಾಗಿದ್ದು, ದಿನದಿಂದ ದಿನಕ್ಕೆ ಒಂದಿಲ್ಲೊಂದು ರೀತಿಯಲ್ಲಿ ಗೊಂದಲಗಳು ಸೃಷ್ಟಿಯಾಗುತ್ತಲೆ ಇದೆ.

ಒಂದು ಕಡೆ ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ನಾನೇ ಉತ್ತರಾಧಿಕಾರ ಎಂದು ಹೇಳುತ್ತಿದ್ದಾರೆ. ಮತ್ತೊಂದು ಕಡೆಯಲ್ಲಿ ಘಟಪ್ರಭಾದ ಮಲ್ಲಿಕಾರ್ಜುನ ಸ್ವಾಮೀಜಿ ನಾನು ಶ್ರೀ ಮಠದ ಉತ್ತರಾಧಿಕಾರ ಎಂದು ಹೇಳುತ್ತಿದ್ದಾರೆ. ಅಲ್ಲದೇ ಮೂಜಗು ಅವರು ಉತ್ತರಾಧಿಕಾರದ ಕುರಿತು ಯಾವುದೇ ಸ್ಪಷ್ಟನೆ ನೀಡದಿರುವುದು ಗೊಂದಲಕ್ಕೆ ಕಾರಣವಾಗಿದ್ದು, ದಿಂಗಾಲೇಶ್ವರ ಬೆಂಬಲಿಗರು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿ ದಿಂಗಾಲೇಶ್ವರ ಸ್ವಾಮೀಜಿಯವರನ್ನು ಶ್ರೀ ಮಠದ ಉತ್ತರಾಧಿಕಾರ ಎಂದು ಘೋಷಣೆ ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಸೋಶಿಯಲ್ ವಾರ್ ನಡೆಸಿದ್ದಾರೆ

ದಿಂಗಾಲೇಶ್ವರ ಸ್ವಾಮೀಜಿಯವರ ಸತ್ಯ ದರ್ಶನ ಯಾವುದೇ ಪ್ರಭಾವ ಬೀರಿಲ್ಲ ಎಂಬುವಂತ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬರುತ್ತಿರುವ ಬೆನ್ನಲ್ಲೇ ಸೋಶಿಯಲ್ ವಾರ್ ಪ್ರಾರಂಭಗೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಒಟ್ಟಿನಲ್ಲಿ ಮೂರುಸಾವಿರ ಮಠದ ವಿವಾದ ಕೋರ್ಟ್ ಮೆಟ್ಟಿಲೇರಿದೆ


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ