ಚೆನ್ನೈ: ಕೋವಿಡ್-19 ಬಳಲುತ್ತಿರುವ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಗಂಭೀರವಾಗಿದ್ದು, ಜೀವರಕ್ಷಕ ವ್ಯವಸ್ಥೆಯೊಂದಿಗೆ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ.
ಕೊರೊನಾ ಸೋಂಕು ದೃಢಪಟ್ಟ ಕಾರಣದಿಂದ ಆಗಸ್ಟ್ 5ರಂದು ಅವರನ್ನು ಎಂಜಿಎಂ ಹೆಲ್ತ್‌ಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಬಾಲಸುಬ್ರಹ್ಮಣ್ಯಂ ಅವರಿಗೆ ತೀವ್ರ ನಿಗಾ ಘಟಕ(ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ’ ಎಂದು ಆಸ್ಪತ್ರೆಯ ವೈದ್ಯಕೀಯ ಸೇವೆಯ ಸಹಾಯಕ ನಿರ್ದೇಶಕಿ ಡಾ.ಅನುರಾಧ ಭಾಸ್ಕರನ್ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.