Breaking News

ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 7 ಲಕ್ಷ ದಾಟಿತು!

Spread the love

ಕರ್ನಾಟಕದಲ್ಲಿ ಕೊವಿಡ್ -19 ಸೋಂಕಿತರ ಸಂಖ್ಯೆ ಇಂದು 7 ಲಕ್ಷ ದಾಟಿದೆ . ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಸಾಯಂಕಾಲ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ 102 ಜನ ಸೋಂಕಿಗೆ ಬಲಿಯಾಗಿದ್ದಾರೆ ಮತ್ತು ಹೊಸದಾಗಿ 10,517 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ .

ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 9,891 ಜನರ ಸಾವನ್ನಪ್ಪಿದ್ದಾರೆ , ಒಟ್ಟು ಸೋಂಕಿತರ ಸಂಖ್ಯೆ 7,00,786 ಕ್ಕೇರಿದೆ . ಸೋಂಕಿತರಲ್ಲಿ 5,69,947 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ , ಮಿಕ್ಕಿದ 1,20,929 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ .

ಬೆಂಗಳೂರಿನಲ್ಲಿ ಇಂದು ಕೊವಿಡ್ -19 ಸೋಂಕು 30 ಜನರನ್ನು ಬಲಿ ತೆಗೆದುಕೊಂಡಿದೆ ಮತ್ತು ಹೊಸದಾಗಿ 4,563 ಜನರಲ್ಲಿ ಕಾಣಿಸಿಕೊಂಡಿದೆ . ನಗರದಲ್ಲಿ ವ್ಯಾಧಿಗೆ ತುತ್ತಾದವರ ಸಂಖ್ಯೆ 3,320 ತಲುಪಿದೆ ಹಾಗು ಸೋಂಕಿತರು 2,76,934 ರಷ್ಟಾಗಿದ್ದಾರೆ .

ಸೋಂಕಿತರ ಪೈಕಿ 2,08,702 ಜನ ಗುಣಮುಖರಾಗಿದ್ದರೆ ಉಳಿದ 64,911 ಜನರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ .


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ