Home / ಜಿಲ್ಲೆ / ಬೆಳಗಾವಿ / ಗೋಕಾಕ / ಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ ಬೇಡ : ರಾಜೇಶ್ವರಿ ಹಿರೇಮಠ

ಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ ಬೇಡ : ರಾಜೇಶ್ವರಿ ಹಿರೇಮಠ

Spread the love

ಬೆಟಗೇರಿ : ನಮ್ಮ ದೇಶದ ವಿಜ್ಞಾನಿಗಳು ತಯಾರಿಸಿದ ಕೋವಿಡ್-19 ಲಸಿಕೆ ಬಗ್ಗೆ ವಿಶ್ವವೇ ಹೆಮ್ಮೆಪಡುತ್ತಿದೆ. ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮಗಳು ಆಗುವುದು ತುಂಬಾ ವಿರಳ, ಇದು ಸುರಕ್ಷಿತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ತಿಳಿಸಿದರು.

 

ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ನಡೆದ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಈಗ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ ಬೇಡ, ಯಾವುದೇ ಹಿಂಜರಿಕೆಯಿಲ್ಲದೇ ಸಾರ್ವಜನಿಕರು ಕರೊನಾ ಲಸಿಕೆ ಪಡೆಯಿರಿ ಎಂದರು.

 

ಬೆಟಗೇರಿ ತಾಪಂ. ಸದಸ್ಯ ಲಕ್ಷ್ಮಣ ನೀಲಣ್ಣವರ ಕೋವಿಶೀಲ್ಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳನ್ನು ಕೆಲ ಗಂಟೆಗಳ ಕಾಲ ತಮ್ಮ ನಿಗಾದಲ್ಲಿರಿಸಿಕೊಂಡು ಬಳಿಕ ಮನೆಗೆ ಕಳುಹಿಸಲಾಯಿತು.

 

ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ, ಪಿಎಚ್‍ಸಿ ವೈದ್ಯಾಧಿಕಾರಿ ಭುವನೇಶ್ವರಿ ಚೆನ್ನಾಳ, ಡಾ.ಲಕ್ಷ್ಮಣ ಖವಟಕೊಪ್ಪ, ಸರೋಜಾ ಬಿಸನಾಳ, ರವಿ ಹೊಳ್ಳಿಕೇರಿ, ಗ್ರಾಪಂ ಮಾಜಿ ಅಧ್ಯಕ್ಷ ಈಶ್ವರ ಬಳಿಗಾರ, ಕುಲಗೋಡ ಪೊಲೀಸ್ ಠಾಣೆಯ ಸ್ಥಳೀಯ ಬೀಟ್ ಪೇದೆ ಬ್ರಹ್ಮಾನಂದ ಬಿರಾದಾರ, ಪ್ರಕಾಶ ಗುಡದಾರ, ಗುರಪ್ಪ ಆನೆಗುಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇತರರು ಇದ್ದರು.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576*
*Laxmi News*


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ